ದ.ಕ. : ಸೆ. 17ರಿಂದ 8, 9, 10 ನೇ ತರಗತಿ ಆರಂಭ

Advt_Headding_Middle

ಸೆ. 20 ರಿಂದ 6,7 ನೇ ತರಗತಿ ಪ್ರಾರಂಭಿಸಲು ಡಿಸಿ ಸೂಚನೆ

ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು. ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಲೆಗಳನ್ನು ತೆರೆಯುವ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸೆ. 17ರಂದು 8, 9 ಮತ್ತು 10ನೇ ತರಗತಿಗಳನ್ನು ಆರಂಭಿಸಲು ಸೂಚಿಸಿದರು. ಜೊತೆಗೆ ಎಲ್ಲ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸಲು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಶೇ. 99ರಷ್ಟು ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗೆ ಲಸಿಕೆಯನ್ನು ನೀಡಲಾಗಿದ್ದು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಬೇಕು. ಜಿಲ್ಲೆಯಲ್ಲಿ ಈಗಾಗಲೇ 261ಮಕ್ಕಳು ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಪ್ರಾಥಮಿಕ ಸಂಪರ್ಕದಲ್ಲಿದ್ದವರ ನ್ನು ಕಂಡುಹಿಡಿದು ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ಶಾಲೆಗಳು ಆರಂಭವಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹಾಗೂ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿಯನ್ನು ನೀಡಬೇಕು ಎಂದರು.
ಶಾಲೆಗಳು ಆರಂಭವಾದ ನಂತರದ ಮಕ್ಕಳಲ್ಲಿ ಶುಲ್ಕ ಪಾವತಿಸಲು ಒತ್ತಾಯಿಸಬಾರದು. ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಶಾಲೆಯ ಮುಖ್ಯಸ್ಥರು ಒದಗಿಸಬೇಕು. ಶಾಲೆಗಳು ಆರಂಭವಾದ ಬಳಿಕ ಭೌತಿಕ ತರಗತಿಗಳ ಜೊತೆಗೆ ಆನ್ಲೈನ್ ತರಗತಿಗಳನ್ನು ಕೂಡ ಮುಂದುವರಿಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗುವ ಸಂಬಂಧ ಪೋಷಕರ ಅನುಮತಿಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಕಾಲಕಾಲಕ್ಕೆ ಶಿಕ್ಷಕರ ಹಾಗೂ ಶಾಲಾ ಸಿಬ್ಬಂದಿ ಕೋವಿಡ್ ಪರೀಕ್ಷೆ ನಡೆಸಬೇಕು. ವಿದ್ಯಾರ್ಥಿಗಳ ಕುಟುಂಬದವರ ಆರೋಗ್ಯವನ್ನು ಆಯಾ ಶಿಕ್ಷಣ ಸಂಸ್ಥೆಯು ಗಮನಿಸಬೇಕು. ಅವರಲ್ಲಿ ಕೋವಿಡ್ ಲಕ್ಷಣ ಇಲ್ಲದಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು.
ಕೇರಳದಿಂದ ಬರುವ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಉಳಿದುಕೊಳ್ಳುವಂತೆ ನೋಡಬೇಕು. ಇಲ್ಲದಿದ್ದಲ್ಲಿ ಆನ್ ಲೈನ್ ಮೂಲಕ ತರಗತಿ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.