ವಿದ್ಯಾರ್ಥಿನಿಯ ಅತ್ಯಾಚಾರದ ಆರೋಪ : ಯುವಕ ಅರೆಸ್ಟ್

Advt_Headding_Middle

 

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ನಡೆಸಿದ್ದಾನೆಂಬ ಆರೋಪದಲ್ಲಿ ಯುವಕನನ್ನು ಸುಳ್ಯ ಪೋಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಮಂಡೆಕೋಲು ಗ್ರಾಮದ ಸೊರಂಜ ಜಿತೇಶ್ ಬಂಧಿತ ಆರೋಪಿ. ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್ ಸ್ಟ್ರಾಗ್ರಾಂನಲ್ಲಿ ಪರಿಚಯಿಸಿಕೊಂಡ ಜಿತೇಶ್ ಆಕೆಯ ಜತೆ ಪ್ರೀತಿಯ ನಾಟಕವಾಡಿ ಮನೆಯಿಂದ ಕರೆದೊಯ್ದು ಅತ್ಯಾಚಾರ ನಡೆಸಿದನೆನ್ನಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯ ಮನೆಯವರು ಸುಳ್ಯ ಪೋಲೀಸರಿಗೆ ದೂರು ನೀಡಿದ್ದು ಪೋಲೀಸರು ನಿನ್ನೆ ಜಿತೇಶ್‌ನನ್ನು ಅಡ್ಕಾರ್ ಬಳಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ. ಯುವಕ ವಿದ್ಯಾರ್ಥಿನಿಯನ್ನು ಕರೆದೊಯ್ಯುತ್ತಿದ್ದ ಆಲ್ಟೋ ಕಾರನ್ನು ಕೂಡಾ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.