ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ

Advt_Headding_Middle

 

ಪೋಷಣ್ ಅಭಿಯಾನ ಮಾಸಾಚರಣೆ, ಮಾತೃವಂದನಾ ಸಪ್ತಾಹ

ಸನ್ಮಾನ ಕಾರ್ಯಕ್ರಮ, ಪೌಷ್ಟಿಕ ಆಹಾರದ ಪ್ರದರ್ಶನ

ಅಂಗನವಾಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ,ಧನಲಕ್ಷ್ಮೀ ಗೊಂಚಲು ಸಮಿತಿ ಬೆಳ್ಳಾರೆ ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಪೋಷಣ್ ಅಭಿಯಾನ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯ ಕ್ಷೆ ಶ್ರೀಮತಿ ಗೌರಿ ನೆಟ್ಟಾರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಸುದ್ದಿ ಪತ್ರಿಕೆಯವರು ನಡೆಸಿದ ಜನಮೆಚ್ಚಿನ ಅಧಿಕಾರಿ ಆಯ್ಕೆಯಲ್ಲಿ ಮತದಾನದ ಮೂಲಕ ಆಯ್ಕೆಯಾದ ಸಿ.ಡಿ.ಪಿ.ಒ ಶ್ರೀಮತಿ ರಶ್ಮಿ ಮತ್ತು ಚಾಲಕ ಯೋಗೀಶ್ ರವರನ್ನು ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ವತಿಯಿಂದ ಶಾಲು ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಸಂಜಯ್ ನೆಟ್ಟಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಪ್ರಾಸ್ತಾವಿಕ ಮಾತನಾಡಿದರು.

ವೇದಿಕೆಯಲ್ಲಿ ಬೆಳ್ಳಾರೆ ಜೇಸೀ ಅಧ್ಯಕ್ಷ ಪದ್ಮನಾಭ ಕಲಾಸುಮ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷೆ ಶ್ರೀಮತಿ ಸುಜಾತ ಜನಾರ್ಧನ ಚೀಮುಳ್ಳು, ಸ್ನೇಹ ಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಹೊನ್ನಮ್ಮ ಬಸ್ತಿಗುಡ್ಡೆ ಉಪಸ್ಥಿತರಿದ್ದರು.

ಪೂರ್ಣಿಮಾ ನೆಟ್ಟಾರು ಪ್ರಾರ್ಥಿಸಿ, ಮಾಸ್ತಿಕಟ್ಟೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಇಂದಿರ ಸ್ವಾಗತಿಸಿ, ಬೆಳ್ಳಾರೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.

ಅಂಗನವಾಡಿ ಕೇಂದ್ರದಲ್ಲಿ ನುಗ್ಗೆ ಗಿಡವನ್ನು ನೆಡಲಾಯಿತು.
ಸಿ.ಡಿ.ಪಿ.ಒ ರಶ್ಮಿಯವರು ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.