ಸೆ.17 ರಂದು ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಲಸಿಕಾ ಮೇಳ

Advt_Headding_Middle

ನ.ಪಂ.ನಲ್ಲಿ ಟಾಸ್ಕ್ ಫೋರ್ಸ್ ಸಭೆ

ಸೆಪ್ಟೆಂಬರ್ 17 ರಂದು ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 5  ಕಡೆಗಳಲ್ಲಿ ಕೊರೋನ ಲಸಿಕಾ ಮೇಳ ನಡೆಯಲಿದ್ದು, ಆ ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸುವ ಬಗ್ಗೆ ಚರ್ಚಿಸುವುದಕ್ಕಾಗಿ ಇಂದು ನಗರ ಪಂಚಾಯತ್ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಲಸಿಕೆ ನೀಡುವ ಕುರಿತು ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಸಭೆಯಲ್ಲಿ ಹಾಜರಿದ್ದರು. ನಗರ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ಧ ನಾಯ್ಕ್ , ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ, ಗ್ರಾಮಕರಣಿಕ ತಿಪ್ಪೇಶ್ ಉಪಸ್ಥಿತರಿದ್ದರು.
” ಗರ್ಭಿಣಿಯರು ಮತ್ತು ಬಾಣಂತಿಯರು ಕೊರೊನಾ ಲಸಿಕೆ ಪಡೆದುಕೊಳ್ಳುವುದು ಉತ್ತಮ ” ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಹೇಳಿದ್ದಾರೆ.
ಬಾಣಂತಿಯರು ೩ ತಿಂಗಳು ಕಳೆದ ಬಳಿಕ ಲಸಿಕೆ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಕೆಲವು ಅಂಗನವಾಡಿ ಕಾರ್ಯಕರ್ತೆಯರು ಗಮನ ಸೆಳೆದಾಗ ” ಬಾಣಂತಿಯರು ಮತ್ತು ಗರ್ಭಿಣಿಯರು ಲಸಿಕೆ ಪಡೆದುಕೊಂಡರೆ ಅವರ ಆರೋಗ್ಯಕ್ಕೆ ಒಳ್ಳೆಯದು. ಈ ಬಗ್ಗೆ ಆರೋಗ್ಯ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ” ಎಂದು ನಂದಕುಮಾರ್ ಹೇಳಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.