ಸುಳ್ಯ ಇನ್ನರ್ ವೀಲ್ ವತಿಯಿಂದ ತೊಡಿಕಾನದಲ್ಲಿ ಫ್ಯಾಬ್ರಿಕ್ ಡಿಸೈನ್ ತರಬೇತಿ

Advt_Headding_Middle

ಸುಳ್ಯ ಇನ್ನರ್ ವೀಲ್ ಕ್ಲಬ್  ವತಿಯಿಂದ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಭಾಂಗಣದಲ್ಲಿ ಫಾಬ್ರಿಕ್ ಡಿಸೈನಿಂಗ್ ತರಬೇತಿ ಕಾರ್ಯಕ್ರಮ ಜರುಗಿತು. ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಪೂಜಾ ಸಂತೋಷ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಶ್ರಿಮತಿ ಚಂದ್ರಕಲಾ ಕುತ್ತಮೊಟ್ಟೆ ಉದ್ಘಾಟಿಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಶ್ರಿಮತಿ ಭವಾನಿ ಚಿಟ್ಟನ್ನೂರ್, ಮಾಲಿನಿ ಉಳುವಾರು ಉಪಸ್ಥಿತರಿದ್ದರು. ಇನ್ನರ್ ವೀಲ್ ಕ್ಲಬ್ ಸದಸ್ಯೆ ಶ್ರೀಮತಿ ಜಯಲಕ್ಷ್ಮಿ ಜೆ.ಕೆ. ರೈ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನಡೆಸಿಕೊಟ್ಟರು. ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ಶ್ರಿಮತಿ ವಿನುತಾ ಶೇಟ್ ಸ್ವಾಗತಿಸಿ, ಮಲ್ಲಿಕಾರ್ಜುನ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶ್ರೀಮತಿ ವೇದಾವತಿ ಕುತ್ತಮೊಟ್ಟೆ ವಂದಿಸಿದರು. ಇನ್ನರ್ ವೀಲ್ ಕ್ಲಬ್ ವೆಬ್ಸೈಟ್ ಅರ್ಗನೈಸರ್ ಶ್ರೀಮತಿ ಯೋಗೀತಾ ಗೋಪಿನಾಥ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.