ಸುಳ್ಯ: ಕಾನೂನು ಅರಿವು ಕಾರ್ಯಕ್ರಮ

Advt_Headding_Middle

ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ, ದ.ಕ. ವಕೀಲರ ಸಂಘ ಸುಳ್ಯ, ಪೋಲಿಸ್ ಇಲಾಖೆ ಸುಳ್ಯ, ಸುದ್ದಿ ಸಮೂಹ ಸಂಸ್ಥೆ ಮತ್ತು ನಗರ ಪಂಚಾಯತ್ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ಸೆ. 17ರಂದು ನಡೆಯಿತು. ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಸದಸ್ಯ ಕಾರ್ಯದರ್ಶಿ ಯಶ್ವಂತ್ ಕುಮಾರ್ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸೋಮಶೇಖರ್ ಎ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ, ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಪಿ. ಶಿವಾನಂದ, ಸುಳ್ಯ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ಧನ್ ಮತ್ತು ಸುಳ್ಯ ವಕೀಲರ ಸಂಘದ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯ ವಕೀಲರಾದ ನಳಿನ್ ಕುಮಾರ್ ಕೋಡ್ತುಗುಳಿ ಕಾನೂನು ಅರಿವು ಬಗ್ಗೆ ಮಾತನಾಡಿದರು. ಸರಕಾರಿ ಸಹಾಯಕ ಅಭಿಯೋಜಕರ ಕಛೇರಿ ಸಿಬ್ಬಂದಿ ಶ್ರೀಮತಿ ಪೂರ್ಣಿಮಾ ಕೃಷ್ಣರಾಜ್ ಪ್ರಾರ್ಥಿಸಿದರು. ತಾಲೂಕು ಕಾನೂನು ಸೇವೆಗಳ ಸಮಿತಿಯ ಆಡಳಿತ ಸಹಾಯಕಿ ಕು. ಲಾವಣ್ಯ ಕೆ.ಎಸ್ ಸ್ವಾಗತಿಸಿದರು. ತಾಲೂಕು ಕಾನೂನು ಸೇವಾ ಸಮಿತಿ ದಲಾಯತ್ ಕು. ರಕ್ಷಿತಾ ಮತ್ತು ಸುದ್ದಿ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.