ಸುಳ್ಯದ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಧ್ಯಾಯರವರ ೧೦೫ನೇ ಜನ್ಮ ಜಯಂತಿ

Advt_Headding_Middle

ರಾಷ್ಟ್ರೀಯವಾದಿ ಚಿಂತಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಧ್ಯಾಯರವರ 105 ನೇ ಜನ್ಮ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳನ್ನು ಅರ್ಪಿಸುವ ಕಾರ್ಯಕ್ರಮವನ್ನು ಇಂದು ಸುಳ್ಯ ದ ಬಿ.ಜೆ.ಪಿ ಕಛೇರಿಯಲ್ಲಿ ಆಚರಿಸಲಾಯಿತು. ಹಿರಿಯರು, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಪಂಡಿತ್ ದೀನ್ ದಯಾಳ್ ಉಪದ್ಯಾಯರವರು ಕಷ್ಟದ ದಿನಗಳಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮಾಡಿದ ತ್ಯಾಗ ಸೇವೆಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ರಾದ ಎ. ವಿ. ತೀರ್ಥರಾಮ, ಜಿಲ್ಲಾ ಯುವಮೋರ್ಚದ ಅಧ್ಯಕ್ಷ ರಾದ ಗುರುದತ್ ನಾಯಕ್, ಮಂಡಳ ಬಿಜೆಪಿ ಕಾರ್ಯದರ್ಶಿ ಗಳಾದ ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ನಗರ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಐ.ಬಿ. ಚಂದ್ರಶೇಖರ್, ಜಿಲ್ಲಾ ಬಿಜೆಪಿ ಸದಸ್ಯರರಾದ ವೆಂಕಟ್ ದಂಬೆಕೋಡಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ನಗರ ಪಂಚಾಯತ್ ಉಪಾಧ್ಯಕ್ಷ ಸರೋಜಿನಿ ಪೆಲ್ತಡ್ಕ, ನಗರ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಬುದ್ಧ ನಾಯ್ಕ್, ನಗರ ಪಂಚಾಯತ್ ಸದಸ್ಯರುಗಳಾದ ಸುಧಾಕರ್, ಶೀಲ ಅರುಣ್ ಕುರುಂಜಿ, ಕಿಶೋರಿ ಶೇಟ್, ಶಶಿಕಲಾ ದುಗಲಡ್ಕ, ಶಿಲ್ಪಾ ಸುದೇವ್, ಬಾಲಕೃಷ್ಣ ರೈ, ಸಿ.ಎ ಬ್ಯಾಂಕ್‌ನ ಅಧ್ಯಕ್ಷ ಹರೀಶ್ ಬೂಡುಪನ್ನೆ, ಸಿಎ ಬ್ಯಾಂಕ್ ನ ನಿರ್ದೇಶಕ ನವೀನ್ ಕುದ್ಪಾಜೆ, ಬೂತ್ ಸಮಿತಿಯ ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಯುವಮೋರ್ಚದ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಮಂಡಲ ಕಾರ್ಯದರ್ಶಿ ಮೋಹಿನಿ ನಾಗರಾಜ್, ಜಾಲ್ಸೂರು ಗ್ರಾಮ ಪಂಚಾಯಿತ್ ನ ಮಾಜಿ ಅಧ್ಯಕ್ಷ ಅಶೋಕ್ ಅಡ್ಕಾರ್, ಜಯನಗರ ಬೂತ್ ಅಧ್ಯಕ್ಷ ರೋಹಿತ್ ಕೊಯಿಂಗೋಡಿ, ಚಂದ್ರಶೇಖರ್ ಕೇರ್ಪಳ, ದಯಾನಂದ ಕೇರ್ಪಳ, ಜಗದೀಶ್ ಸರಳಿಕುಂಜ, ದಾಮೋದರ ಮಂಚಿ, ಶೀನಪ್ಪ ಬಯಂಬು, ವಿಜಯ ಕಾಯರ್ತೋಡಿ, ಚಂದ್ರಶೇಖರ್ ಪೂಜಾರಿ ಭಾಗವಹಿಸಿದ್ದರು.
ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರತಿಜ್ಞಾವಿಧಿಯನ್ನು ಸುಭೋದ್ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಡಲ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.
ಐ.ಬಿ. ಚಂದ್ರಶೇಖರ್ ಸ್ವಾಗತಿಸಿ, ಜಿನ್ನಪ್ಪ ಪೂಜಾರಿ ವಂದಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.