ಅ.6-15; ಕೇರ್ಪಡ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Advt_Headding_Middle

 

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದಂತೆ ನವರಾತ್ರಿ ಉತ್ಸವವು ಅಕ್ಟೋಬರ್ 6 ರಿಂದ 15 ರವರೆಗೆ ಬ್ರಹ್ಮಶ್ರೀ ನಾಗೇಶ ತಂತ್ರಿ ಕೆಮ್ಮಿಂಜೆ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.
ಪ್ರತಿದಿನ ಬೆಳಿಗ್ಗೆ ,ಮಧ್ಯಾಹ್ನ ,ರಾತ್ರಿ ನವರಾತ್ರಿ ಉತ್ಸವ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ನವರಾತ್ರಿ ದಿನಗಳಲ್ಲಿ ಸರ್ವಸೇವೆ,ರಂಗಪೂಜೆ, ಅಲಂಕಾರ ಸೇವೆ, ನಿತ್ಯ ಪೂಜೆ, ದುರ್ಗಾಪೂಜೆ,ಹೂವಿನ ಪೂಜೆ, ಕುಂಕುಮಾರ್ಚನೆ ಮುಂತಾದ ಸೇವೆಗಳು ನಡೆಯಲಿದೆ. ಅ. 14ರಂದು ಆಯುಧ ಪೂಜೆ ನಡೆಯಲಿದ್ದು 15ರಂದು ಬೆಳಿಗ್ಗೆ ಗಣಪತಿ ಹವನ, ಸಿಯಾಳಾಭಿಷೇಕ, ಮಕ್ಕಳಿಗೆ ಅಕ್ಷರಾಭ್ಯಾಸ, ಮಹಾಪೂಜೆ ,ಮಹಾ ಸಂಪ್ರೋಕ್ಷಣೆ ನಡೆಯಲಿದೆ. ನವರಾತ್ರಿ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ, ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಭಕ್ತಾದಿಗಳ ಪ್ರಾಯೋಜಕತ್ವದಲ್ಲಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತಾಧಿಕಾರಿ ಬಸವರಾಜ್ ಬಿ.,ಉತ್ಸವ ಸಮಿತಿ ಅಧ್ಯಕ್ಷ ಯತೀಂದ್ರನಾಥ ರೈ ಪಿ.ಡಿ‌. ತಿಳಿಸಿರುತ್ತಾರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.