ಅ.2: ಅಡ್ಕಾರು ನವೀಕೃತ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ

Advt_Headding_Middle

 

ಗಾಂಧಿ ಜಯಂತಿ ಅಂಗವಾಗಿ ವಿಶೇಷ ಗ್ರಾಮಸಭೆ

ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನವೀಕೃತಗೊಂಡಿರುವ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭವನದ ಬಳಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ, ಘನತ್ಯಾಜ್ಯ ಸಂಗ್ರಹಣೆ ವಾಹನಕ್ಕೆ ಚಾಲನೆ ಹಾಗೂ ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ವಿಶೇಷ ಗ್ರಾಮಸಭೆಯು ಅ.2ರಂದು ಜರುಗಲಿದೆ.
ನವೀಕೃತಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಉದ್ಘಾಟಿಸಲಿದ್ದಾರೆ. ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಬಾಬು ಕೆ.ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಎನ್. , ಸುಳ್ಯದ ಗ್ರೇಡ್ 2 ತಹಶಿಲ್ದಾರ್ ಮಂಜುನಾಥ ಎಂ.,ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ಪೇರಾಲು ಉಪಸ್ಥಿತರಿರಲಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಭವನ ಸಮುದಾಯ ಭವನದ ಉದ್ಘಾಟನೆಯ ಬಳಿಕ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜನ್ಮದಿನದ ಅಂಗವಾಗಿ ನಮ್ಮ ಗ್ರಾಮ ನಮ್ಮ ಯೋಜನೆಗಳ ಪಟ್ಟಿ ತಯಾರಿಕೆ ಹಾಗೂ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಕ್ರೀಯಾ ಯೋಜನೆ ತಯಾರಿಕೆಯ ಬಗ್ಗೆ ವಿಶೇಷ ಗ್ರಾಮಸಭೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ. ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರುಗಳು ಉಪಸ್ಥಿತರಿರಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.