ಕಮಿಲ- ಬಳ್ಪ ರಸ್ತೆ ವ್ಯವಸ್ಥೆ ಗೆ ಜಲ್ಲಿ ಮಿಶ್ರಣ ನೀಡಿ ನಾವೇ ತಾತ್ಕಾಲಿಕ ದುರಸ್ತಿ ಮಾಡುತ್ತೇವೆ

Advt_Headding_Middle

ಬಳ್ಪ ಉತ್ಪಾದಕರ ಸಹಕಾರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಸುಳ್ಯ ತಾಲೂಕಿನ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ಅವ್ಯವಸ್ಥೆಯಿಂದ ಕೂಡಿದ್ದು ಅದನ್ನು ಸರಿಪಡಿಸಲು ಬಳ್ಪ ಹಾಲು ಉತ್ಪಾದಕರ ಸಹಕಾರಿ ಸಂಘ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು ಜಲ್ಲಿ ಮಿಶ್ರಣ ನೀಡಿದರೆ ಸಂಘದ ವತಿಯಿಂದಲೇ ತಾತ್ಕಾಲಿಕ ದುರಸ್ತಿ ಮಾಡುತ್ತೇವೆ ಎಂದು ಕೇಳಿಕೊಂಡಿದೆ.

ಸಂಘಕ್ಕೆ ಹಾಲು ತರಲು ಕೂಡಾ ಕಷ್ಟವಾಗುತ್ತಿದ್ದು, ಅನೇಕ ವರ್ಷಗಳಿಂದ ಈ ಸಮಸ್ಯೆ ಇದೆ.
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ಅನೇಕ ವರ್ಷಗಳಿಂದ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಓಡಾಟಕ್ಕೆ ತೀವ್ರ ಸಂಕಷ್ಟವಾಗಿದೆ. ಈ ಬಗ್ಗೆ ಬಳ್ಪ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭೆಯಲ್ಲಿ ಪ್ರಸ್ತಾಪಿಸಿದ ಅಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ,
ಮಳೆಯಿಂದ ಹಾನಿಗೊಳಗಾದ ಈ ರಸ್ತೆಯನ್ನು ತಾತ್ಕಾಲಿಕ ದುರಸ್ತಿ ಮಾಡಲು ಸುಮಾರು 15-20 ಲೋಡ್‌ ಜಲ್ಲಿ ಮಿಶ್ರಣ ಬೇಕಾಗಬಹುದು. ಈ ಮಿಶ್ರಣವನ್ನು ಜಿಲ್ಲಾಧಿಕಾರಿಗಳು ಒದಗಿಸಿದರೆ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರೆಲ್ಲಾ ಸೇರಿ ಸಮತಟ್ಟು ಮಾಡುವ ಕೆಲಸವನ್ನು ಮಾಡುತ್ತೇವೆ ಸಂಘದ ವತಿಯಿಂದ ಸಲ್ಲಿಸಲಾದ ಮನವಿಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.