ಅ. 16ರಂದು ಅಮರಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

Advt_Headding_Middle

 

 

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅ. 16ರಂದು ಸುಳ್ಯ ತಾಲೂಕಿನ ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮವಾಸ್ತವ್ಯ ಮಾಡುವುದಾಗಿ ತಿಳಿದುಬಂದಿದೆ.

ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯವನ್ನು ತಿಂಗಳ 3ನೇ ಶನಿವಾರದಂದು ಹಮ್ಮಿಕೊಳ್ಳುವುದಾಗಿ ತಿಳಿದುಬಂದಿದೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಮನೆಗಳ ಸರ್ವೆ ಮಾಡಿ ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ಮಾಡಲಾಗಿದೆ .ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಜಿಲ್ಲಾಧಿಕಾರಿಯವರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ.ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿರುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳು ಸೂಚಿಸಿರುತ್ತಾರೆ ಹೆಚ್ಚಿನ ಮಾಹಿತಿಗಾಗಿ ಸುಳ್ಯ ತಾಲೂಕು ಕಚೇರಿಯನ್ನು ಸಂಪರ್ಕಿಸಿ ಪಡೆದುಕೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ. ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಸಂದರ್ಭದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.