ಪಂಜ: ಶ್ರೀ ಶಾರದೋತ್ಸವ ಸ್ಪರ್ಧಾ ಕಾರ್ಯಕ್ರಮ ಉದ್ಘಾಟನೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ತಂಡದಿಂದ ಯಕ್ಷ ಗಾನ ವೈಭವ

Advt_Headding_Middle

ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ, ಪಂಜ ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ ಅ. 14ರಂದು ಶ್ರೀ ಶಾರದೋತ್ಸವದ ಪ್ರಯುಕ್ತ ಶ್ರೀ ಶಾರದಾದೇವಿ ಪ್ರತಿಷ್ಠೆ ನಡೆದು ಭಜನೆ,ಕುಣಿತ ಭಜನೆ , ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು.

ಸ್ಪರ್ಧಾ ಕಾರ್ಯಕ್ರಮವನ್ನು ಪಂಜ ನಾಡಕಛೇರಿಯ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ ಆರ್ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಪಳಂಗಾಯ ವಹಿಸಿದ್ದರು. ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕ ಸತೀಶ್ ಪಂಜ, ಶ್ರೀಮತಿ ಸರೋಜಿನಿ ಕೆಮ್ಮೂರು,ಉತ್ಸವ ಸಮಿತಿ ಉಪಾಧ್ಯಕ್ಷ ಲೋಕೇಶ್ ಬರೆಮೇಲು,ಕಾರ್ಯದರ್ಶಿ ನಾಗಮಣಿ ಕೆದಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ ಆರ್ ರವರನ್ನು ಸನ್ಮಾನಿಸಲಾಯಿತು.ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಜರುಗಿತು.ಕಾರ್ಯಕ್ರಮದಲ್ಲಿ ಶ್ರೀಮತಿ ಸರೋಜಿನಿ ಕೆಮ್ಮೂರು ಸ್ವಾಗತಿಸಿದರು.ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು. ಶ್ರೀಮತಿ ವೇದಾವತಿ ಬೊಳ್ಳಾಜೆ ವಂದಿಸಿದರು.

ಯಕ್ಷಗಾನ ವೈಭವ:
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಧ್ಯಾಹ್ನ 1.30 ರಿಂದ ಸಾಂಸ್ಕೃತಿಕ ಸಂಭ್ರಮದಲ್ಲಿ ಯಕ್ಷ ಗಾನ ವೈಭವ ಭಾಗವತರು ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಪ್ರಶಾಂತ್ ರೈ ಪಲ್ಲೋಡಿ, ಶ್ರೀಮತಿ ಭವ್ಯಶ್ರೀ ಕುಲ್ಕುಂದ, ಕು.ರಚನಾ ಚಿದ್ಗಲ್ಲು, ಚೆಂಡೆ ರೋಹಿತ್ ಉಚ್ಚಿಲ, ಗಗನ್ ಪಂಜ, ಮದ್ದಳೆ ಲವಕಮಾರ್ ಐಲ ಪಾಲ್ಗೊಳ್ಳಲಿದ್ದಾರೆ .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.