ಬಾಳಿಲ: ಸಾರ್ವಜನಿಕ ಶ್ರೀ ಶಾರದೋತ್ಸವ ಸಭಾ ಕಾರ್ಯಕ್ರಮ

Advt_Headding_Middle

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ- ಮುಪ್ಪೇರ್ಯ ಇದರ ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ. 14ರಂದು ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

 

ಬೆಳಿಗ್ಗೆ ಶ್ರೀ ಶಾರದಾ ದೇವಿಯ ವಿಗ್ರಹ ಆಗಮನದ ಬಳಿಕ ಶಾರದಾ ದೇವಿಯ ಪ್ರತಿಷ್ಠಾಪನೆ ನಡೆದು ಸಮಿತಿಯ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು, ಬೆಳ್ಳಾರೆಯ ಉದ್ಯಮಿ ಮಿಥುನ್ ಶೆಣೈ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಮಿತಿಯ ಗೌರವ ಸಲಹೆಗಾರದ ಎ.ಕೆ. ನಾಯ್ಕ್ ಅಮೆಬೈಲು, ಚೊಕ್ಕಾಡಿ ಮತ್ತು ಅಶೋಕ್ ಶೆಟ್ಟಿ, ‘ಅರ್ಚನಾ‌ ಬಾಳಿಲ’ ಭಾಗವಹಿಸಿದ್ದರು. ಸಮಿತಿಯ ಅಧ್ಯಕ್ಷ ರೋಹಿತ್ ಚಾಕೋಟೆಡ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ಚಂದ್ರಹಾಸ ಪಾಟಾಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಪುಷ್ಪಾವತಿ ಗಣೇಶ್ ಸ್ವಾಗತಿಸಿ, ರಾಜೇಶ್ ಅಯ್ಯನಕಟ್ಟೆ ವಂದಿಸಿದರು. ಕಮಲ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಶ್ರೀ ಸದಾಶಿವ ಭಜನಾ ಮಂಡಳಿ ಆಲೆಟ್ಟಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.15ರಿಂದ ಲಲಿತ ಸಹಸ್ರ ನಾಮ ಪಾರಾಯಣ, ಕುಂಕುಮಾರ್ಚನೆ ನಡೆಯಲಿದೆ. ಬಳಿಕ ಮಂಗಳಾರತಿ, ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಪ್ರಸಾದ ನಡೆಯಲಿದೆ. ಸಂಜೆ 4.00 ಗಂಟೆಗೆ ಶ್ರೀ ಶಾರದಾದೇವಿಯ ಮೆರವಣಿಗೆ ಬಾಳಿಲದಿಂದ ಹೊರಟು ಬೊಮ್ಮನಮಜಲು ಹೊಳೆಯಲ್ಲಿ ಜಲಸ್ಥಂಭನ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.