ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Advt_Headding_Middle

 

2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ , ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆರ್ಹವಿರುತ್ತಾರೆ. ಅರ್ಜಿ ಸಲ್ಲಿಸಲು ನ.11ಕೊನೆಯ ದಿನಾಂಕವಾಗಿದ್ದು, WWW. ssp.karnataka.gov.in/8080/2122 ಈ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪೋರ್ಟಲ್ ತಂತ್ರಾಶದ ಮೂಲಕ ವಿದ್ಯಾರ್ಥಿ ವೇತನ ಮಂಜೂರಾತಿಗೆ ಸೂಚನೆ: 2021-22ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಯನ್ನು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ತಂತ್ರಾಶದ ಮೂಲಕ ಜಾರಿಗೊಳಿಸುವಂತೆ ನಿರ್ಧರಿಸಲಾಗಿದೆ.

ಈ ಕುರಿತು ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚಿಸಲಾಗಿತ್ತು. ಆದ್ದರಿಂದ ಇನ್ನು ಮುಂದೆ ಇ-ಪಾಸ್ ತಂತ್ರಾಶವನ್ನು ಬಳಸಿ, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಯನ್ನು  ರಾಜ್ಯ ವಿದ್ಯಾರ್ಥಿವೇತನ ತಂತ್ರಾಶದ ಮೂಲಕ ಜಾರಿಗೊಳಿಸಲು ತಿಳಿಸಲಾಗಿದೆ. ಇ-ಆಡಳಿತ ಇಲಾಖೆಯು ಎನ್.ಐ.ಸಿ.ಸಹಯೋಗದೊಂದಿಗೆ ರಾಜ್ಯ ವಿದ್ಯಾರ್ಥಿ ವೇತನ ಅಭಿವೃದ್ಧಿಪಡಿಸಿದೆ.
ಈ ಕುರಿತ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.