ಪಂಜದಲ್ಲಿ 12ನೇ ವರ್ಷದ ಭಜನಾ ತರಬೇತಿ ಶಿಬಿರ ಸಮಾರೋಪ

Advt_Headding_Middle

 

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪಂಜ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಪಂಜ ವಲಯ ಇದರ ವತಿಯಿಂದ 12ನೇ ವರ್ಷದ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಅ.20 ರಂದು ಜರಗಿತು. ಸಭಾಧ್ಯಕ್ಷತೆಯನ್ನು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ವಹಿಸಿದ್ದರು., ಮುಖ್ಯ ಅತಿಥಿಗಳಾಗಿಧರ್ಮಸ್ಥಳ ಮಂಜುನಾಥೇಶ್ವರ ರಾಜ್ಯ ಭಜನಾ ಪರಿಷತ್ ಕಾರ್ಯದರ್ಶಿ
ಬಿ ಜಯರಾಮ ನೆಲ್ಲಿತ್ತಾಯ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಂಜ ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ ಕಲ್ಯಾಣಿ, ಶ್ರೀ ಧರ್ಮಸ್ಥಳ ಮಂಜುನಾಥ ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರವಿ ಬಿ ನಾಗತೀರ್ಥ, ಸುಳ್ಯ ತಾಲೂಕು ಭಜನಾ ಪರಿಷತ್ ಪೂರ್ವಾಧ್ಯಕ್ಷ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಶ್ರೀ ಶಾರದಾಂಬಾ ಭಜನೆ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ, ತರಬೇತುದಾರರಾದ ರಮೇಶ್ ಮೆಟ್ಟಿನಡ್ಕ ಶ್ರೀಮತಿ ರಮ್ಯಾ ದಿಲೀಪ್ ಬಾಬ್ಲುಬೆಟ್ಟು ವೆಂಕಟ್ರಮಣ ಆಚಾರ್ಯ ಕಲ್ಮಡ್ಕ, ಕುಸುಮಾಧರ ಕೆಮ್ಮೂರು, ಶ್ರೀಮತಿ ಸರೋಜಿನಿ ಕೆಮ್ಮೂರು ಉಪಸ್ಥಿತರಿದ್ದರು.
ಶಿಬಿರಾರ್ಥಿಗಳು ಪ್ರಾರ್ಥನೆ ನಡೆಸಿಕೊಟ್ಟರು ಬಾಲಕೃಷ್ಣ ಪುತ್ಯ ಪ್ರಾಸ್ತವಿಕಗೈದು, ಸ್ವಾಗತಿಸಿದರು.
ಐದು ದಿನಗಳ ಈ ತರಬೇತಿ ಕಾರ್ಯಾಗಾರದ ಜವಾಬ್ದಾರಿಯನ್ನು ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಪಂಜ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ರವರನ್ನು ಮತ್ತು ತರಬೇತುದಾರರನ್ನು ಗೌರವಿಸಲಾಯಿತು. ತರಬೇತಿಯಲ್ಲಿ
ಪಾಲ್ಗೊಂಡ 112 ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಸುಮಾರು 32 ವರ್ಷಗಳಿಂದ ನಿಸ್ವಾರ್ಥ ಸೇವೆ, ಕಲೆ, ಸಾಂಸ್ಕೃತಿಕ, ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಗಳಿಸಿರುವ ಭಜನಾ ಮಂಡಳಿಯ ಅಧ್ಯಕ್ಷರಾದ ಬಾಲಕೃಷ್ಣ ಪುತ್ಯ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು. ಗುರುಪ್ರಸಾದ್ ತೋಟ ವಂದಿಸಿದರು.


.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.