ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

Advt_Headding_Middle

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನ.23ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿ ಆಗಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ರವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಸಚಿವ ರಮನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಭಯಚಂದ್ರ ಜೈನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು

.

 

ಮಂಜುನಾಥ ಭಂಡಾರಿಯವರು ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯ ಬಂಟ ಕೃಷಿ ಮನೆತನದವರು. ಎಐಸಿಸಿ ಸದಸ್ಯರಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದ ಇವರು, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್‌ನ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ, ಅಖಿಲ ಭಾರತ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. 2014ರಲ್ಲಿ ಇವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಿತರಾಗಿದ್ದರು. 1978ರಲ್ಲಿ ಇಂದಿರಾ ಗಾಂಧಿಯವರು ಚಿಕ್ಕಮಗಳೂರಿನಲ್ಲಿ ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯ ಪ್ರವೇಶ ಮಾಡಿದ್ದ ಮಂಜುನಾಥ ಭಂಡಾರಿಯವರು ಅಮೇರಿಕಾದ ಪ್ರತಿಷ್ಠಿತ ಐಸನ್ ಹೂವರ್ ಫೆಲೋಶಿಪ್ ಪಡೆದವರು. ಪಕ್ಷದ ರಾಜ್ಯ, ರಾಷ್ಟ್ರಮಟ್ಟದ ನಾಯಕರೊಂದಿಗೆ ಇವರು ನಿಕಟ ಸಂಪರ್ಕ ಹೊಂದಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.