ರವಿ ಕಕ್ಕೆಪದವು ಅವರ ಕುರಿತ ” ಬೆಂಕಿಯಲ್ಲಿ ಅರಳಿದ ಹೂವು” ಕೃತಿ ಬಿಡುಗಡೆ

Advt_Headding_Middle

 

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ

ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ ನೇತೃತ್ವದಲ್ಲಿ ಕಾರ್ಯಕ್ರಮ

 

ಸಮಾಜ ಸೇವಕ, ರಾಷ್ಟ್ರ ಪ್ರಶಸ್ತಿ ವಿಜೇತ ರವಿ ಕಕ್ಕೆಪದವು ಅವರ ಕುರಿತು ಡಾ. ರಾಜೇಶ್ವರಿ ಗೌತಮ್ ಬರೆದ `ಬೆಂಕಿಯಲ್ಲಿ ಅರಳಿದ ಹೂವು’ ಕೃತಿ ಬಿಡುಗಡೆ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರಿಗೆ ಅಭಿನಂದನಾ ಸಮಾರಂಭವು ಇಂದು ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.

ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಜೇಸಿಐ ಅಧ್ಯಕ್ಷ ದೀಪಕ್ ನಂಬಿಯಾರ್ ಅಧ್ಯಕ್ಷತೆ ವಹಿಸಿದ್ದರು.

“ಬೆಂಕಿಯಲ್ಲಿ ಅರಳಿದ ಹೂವು” ಕೃತಿಯನ್ನು ಹರೇಕಳ ಹಾಜಬ್ಬರವರು ಕೃತಿ ಬಿಡುಗಡೆ ಮಾಡಿದರು. ಪದ್ಮಶ್ರೀ ಪುರಸ್ಕೃತರಾಗಿರುವ ಹರೇಕಳ ಹಾಜಬ್ಬರನ್ನು ಪುತ್ತೂರಿನ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅಭಿನಂದಿಸಿದರು.

ಸಮಾಜ ಮುಖಿ ಚಟುವಟಿಕೆಗಳಿಂದ ಸಮಾಜಕ್ಕೆ ಹೊಸ ಆದರ್ಶದ ದಾರಿ ತೋರಿಸಿದ ಇಬ್ಬರು ಸಾಧಕರನ್ನು ಗೌರವಿಸುವ ಸಂಪ್ರದಾಯ ಧನಾತ್ಮಕವಾದುದು ಎಂದು ಡಾ. ಯತೀಶ್ ಉಳ್ಳಾಲ್ ಹೇಳಿದರು.

ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆ ಕೃತಿ ಪರಿಚಯ ಹಾಗೂ ಅಭಿನಂದನಾ ಭಾಷಣ ಮಾಡಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮಪ್ರಸಾದ್, ಜೇಸಿಐ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಪಿ.ಜಿ.ಎಸ್.ಎನ್. ಪ್ರಸಾದ್, ಶ್ರೀಮತಿ ವನಜಾ ವಿ. ಭಟ್, ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸೋಮಶೇಖರ ನಾಯಕ್, ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್ ಪ್ರಸಾದ್ ಎನ್., ಅಭಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ನೆಕ್ರಾಜೆ, ಎಸ್‌ಎಸ್‌ಪಿಯುಸಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್., ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ್ ಅಮೈ, ಜೇಸಿಐ ಪೂರ್ವ ರಾಷ್ಟ್ರೀಯ ನಿರ್ದೇಶಕ ಚಂದ್ರಶೇಖರ ನಾಯರ್, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ ಸ್ಥಾಪಕಾಧ್ಯಕ್ಷ ವಿಶ್ವನಾಥ ನಡುತೋಟ, ಐನೆಕಿದು ಸುಬ್ರಹ್ಮಣ್ಯ ಸೊಸೈಟಿ ಮಾಜಿ ಅಧ್ಯಕ್ಷ ರವೀಂದ್ರ ರುದ್ರಪಾದ, ಕುಕ್ಕೆಶ್ರೀ ಜೇಸಿಐ ಕಾರ್ಯದರ್ಶಿ ಸೌಮ್ಯಾ ಭರತ್, ಉಪಾಧ್ಯಕ್ಷೆ ಸವಿತಾ ಭಟ್,ನಿಕಟಪೂರ್ವ ಅಧ್ಯಕ್ಷ ಮಣಿಕಂಠ ವೇದಿಕೆಯಲ್ಲಿದ್ದರು. ಚಂದ್ರಶೇಖರ ನಾಯರ್ ಸ್ವಾಗತಿಸಿದರು. ಭಾರತಿ ದಿನೇಶ್ ವಂದಿಸಿದರು. ವಿಶ್ವನಾಥ ನಡುತೋಟ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.