ಅಸಂಘಟಿತ ಕಾರ್ಮಿಕರನ್ನು ಕಡ್ಡಾಯವಾಗಿ ಇ-ಶ್ರಮ ಪೋರ್ಟಲ್ ನಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಸೂಚನೆ

Advt_Headding_Middle

ಅಸಂಘಟಿತ ಕಾರ್ಮಿಕರ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಜಿಲ್ಲೆಯಲ್ಲಿರುವ 16 ರಿಂದ 59 ವರ್ಷದೊಳಗಿನ ಅಸಂಘಟಿತ ಕಾರ್ಮಿಕರನ್ನು ಕಡ್ಡಾಯವಾಗಿ ಈ ಶ್ರಮ ಪೋರ್ಟಲ್ ನಲ್ಲಿ ನೋಂದಾಯಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು ನ. 30 ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡಾಟಾಬೇಸ್ ರಚಿಸುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರನ್ನು ಪೋರ್ಟಲ್ ನಲ್ಲಿ ನೊಂದಾಯಿಸುವುದರಿಂದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳ ಲಾಭ ಪಡೆಯುತ್ತಾರೆ, ಅಲ್ಲದೇ ಸರ್ಕಾರಕ್ಕೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಅನುಕೂಲವಾಗಲಿದೆ, ಮುಖ್ಯವಾಗಿ ಕಾರ್ಮಿಕರು ಆಕಸ್ಮಿಕವಾಗಿ ಸಾವಿಗೀಡಾದರೆ ಹಾಗೂ ಪೂರ್ಣ ಅಂಗವೈಕಲ್ಯಕ್ಕೆ ಒಳಗಾದರೆ ಎರಡು ಲಕ್ಷ ರೂ.ಗಳ ನೆರವು ಪಡೆಯಲಿದ್ದಾರೆ, ಪ್ರಮುಖವಾಗಿ ಇದು ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಲು ನೆರವು ನೀಡುತ್ತದೆ ಹಾಗೂ ಅವರಿಗೆ ಉದ್ಯೋಗವಕಾಶಗಳನ್ನು ಒದಗಿಸಿಕೊಡುತ್ತದೆ ಎಂದು ಹೇಳಿದರು.


16ರಿಂದ 59 ವರ್ಷದೊಳಗಿನವರು, ಇಎಸ್ ಐ ಹಾಗೂ ಪಿಎಫ್ ಇರದ, ಆದಾಯ ತೆರಿಗೆಗೆ ಒಳಪಡದವರು, ಆಧಾರ್ ಕಾಡ್೯, ಆಧಾರ್ ಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಈ ಶ್ರಮ ಪೋರ್ಟಲ್ ನಲ್ಲಿ ನೋಂದಣಿ ಉಚಿತವಾಗಿದ್ದು, ಯಶಸ್ವಿ ನೊಂದಣಿಯ ನಂತರ ಫಲಾನುಭವಿಗಳು ಗುರುತಿನ ಚೀಟಿ ಪಡೆಯಬಹುದಾಗಿದೆ ಇದು ದೇಶಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿರುತ್ತದೆ ಎಂದ ಜಿಲ್ಲಾಧಿಕಾರಿಯವರು, ಅಸಂಘಟಿತ ವಲಯದ ಕಾರ್ಮಿಕರುಗಳ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿ ಜಿಲ್ಲಾ ಮಟ್ಟದ ಜಾರಿ ಸಮಿತಿ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಈ ಸಮಿತಿಯು ಸಾಮಾನ್ಯ ಸೇವಾ ಕೇಂದ್ರಗಳ ಕಾರ್ಯವೈಖರಿಯನ್ನು ಆಗಿಂದಾಗ್ಗೆ ಪರಿಶೀಲಿಸಿ ನೋಂದಣಿಯ
ಗುರಿಯನ್ನು ತಲುಪಬೇಕು, ಸಂಬಂಧಪಟ್ಟ ಇಲಾಖೆಗಳ ಮೂಲಕ ಜಿಲ್ಲೆಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರುಗಳಾದ ಬೀಡಿ, ಟೈಲರ್, ಅಕ್ಕಸಾಲಿಗರು, ನರೇಗಾ, ಕೃಷಿ ಕಾರ್ಮಿಕರು, ಮೀನುಗಾರರು, ಇತರೆ ವಲಯದ ಕಾರ್ಮಿಕರುಗಳನ್ನು ನೋಂದಾಯಿಸಲು ಕ್ರಮ ವಹಿಸಬೇಕು ಎಂದರು. ಕಾರ್ಮಿಕ ಸಂಘ, ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಇ-ಶ್ರಮ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ನೋಂದಣಿಗಾಗಿ ವಿಶೇಷ ಅಭಿಯಾನಗಳನ್ನು ಜಿಲ್ಲೆಯಲ್ಲಿ ಹಾಗೂ ಸಿ ಎಸ್ ಸಿ ಹಂತದಲ್ಲಿ ಆಯೋಜಿಸಬೇಕು, ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಯ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್,
ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ್, ಕಾರ್ಮಿಕ ಅಧಿಕಾರಿಗಳಾದ ಕಾವೇರಿ, ಅಮರೇಂದ್ರ, ಕಾರ್ಮಿಕ ನಿರೀಕ್ಷಕರು, ಬೀಡಿ, ಟೈಲರಿಂಗ್, ಅಕ್ಕಸಾಲಿಗ ಸೇರಿದಂತೆ ವಿವಿಧ ಅಸಂಘಟಿತ ವಲಯಗಳ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.