ಯೇನೆಕಲ್ಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಗೋಪಾಲ ಗೌಡ ಪರಮಲೆಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Advt_Headding_Middle

 

 

ನ. 28ರಂದು‌ ನಿಧನರಾದ
ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಪರಮಾಲೆ ಗೋಪಾಲ ಗೌಡರಿಗೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಡಿ. 3ರಂದು ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ನಡೆಯಿತು.
ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘ, ರೈತ ಯುವಕ ಮಂಡಲ ಯೇನೆಕಲ್ಲು, ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಶ್ರೀ ಉಳ್ಳಾಕ್ಲು ಉಳ್ಳಾಲ್ತಿ ಬಚ್ಚನಾಯಕ ದೈವಸ್ಥಾನ ಯೇನೆಕಲ್ಲು, ಶ್ರೀ ಆದಿಶಕ್ತಿ ಭಜನಾ ಮಂದಿರ ಯೇನೆಕಲ್ಲು, ಸದ್ಗುರು ಶ್ರೀಮಾತೆ ಅಮೃತಾನಂದಮಯಿ ಅಮೃತ ಕುಟುಂಬ ಯೇನೆಕಲ್ಲು ಇವುಗಳ ಆಶ್ರಯದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಮೇಲ್ನಾಡ್ ದೀಪ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನುಡಿ ನಮನ ಸಲ್ಲಿಸಿದರು. ಬಾಲಾಡಿ ಶ್ರೀ ಆದಿಶಕ್ತಿ ಭಜನಾ‌ ಮಂದಿರದ ಮಾಜಿ ಅಧ್ಯಕ್ಷ ರೇಗಪ್ಪ ಗೌಡ ಪುಂಡಿಗದ್ದೆ, ಯೇನೆಕಲ್ಲು ಸ.ಸಂಘದ ಮಾಜಿ ಉಪಾಧ್ಯಕ್ಷ ಎನ್.ಕೆ. ಮನೋಹರ ನಾಳ, ಮಾಜಿ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಸದ್ಗುರು ಶ್ರೀಮಾತೆ ಅಮೃತಾನಂದಮಯಿ ಅಮೃತ ಕುಟುಂಬ ಯೇನೆಕಲ್ಲು ಇದರ ಮುಂದಾಳು ಚಂದ್ರಶೇಖರ ನಾಯರ್, ಪಂಜ ಜೇಸೀಸ್ ನ ಪೂರ್ವಾಧ್ಯಕ್ಷ ಶಶಿಧರ ಪಳಂಗಾಯ, ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಮೈಸೂರು ವಿಭಾಗದ ವಿಶೇಷಾಧಿಕಾರಿ ಡಾ. ಶಿವಕುಮಾರ್ ಹೆಚ್.ಆರ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಯೇನೆಕಲ್ಲು, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ಉಪಾಧ್ಯಕ್ಷ ಭರತ್ ನೆಕ್ರಾಜೆ ಮೃತರಿಗೆ ನುಡಿನಮನಗಳನ್ನು ಸಲ್ಲಿಸಿದರು. ಯೇನೆಕಲ್ಲು ಪ್ರಾಥಮಿಕ ಕೃ.ಪ.ಸ.ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶೇಖರ ಗೌಡ ಕೇದಿಗೆಬನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗೋಪಾಲ ಗೌಡ ಪರಮಲೆಯವರ ಪತ್ನಿ ಶ್ರೀಮತಿ ಚೆನ್ನಮ್ಮ, ಪುತ್ರರಾದ ಶ್ರೀನಿವಾಸ ಗೌಡ ಪರಮಲೆ, ತೀರ್ಥೇಶ್ ಪರಮಲೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗೋಪಾಲ ಗೌಡರ ಬಂಧುಗಳು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.