ಕೊಡಗು ಜಿಲ್ಲೆಗೆ ಕೆಪಿಸಿಸಿಯ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ವೀಕ್ಷಕರಾಗಿ ಕಾಂಗ್ರೆಸ್ ಮುಖಂಡ ಟಿ. ಎಂ. ಶಹೀದ್ ತೆಕ್ಕಿಲ್ ನೇಮಕ

Advt_Headding_Middle

 

ಕೆಪಿಸಿಸಿಯ ಸದಸ್ಯತ್ವ ನೊಂದಣಿ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಗೆ ಕೆಪಿಸಿಸಿಯ ವೀಕ್ಷಕರಾಗಿ ಕಾಂಗ್ರೇಸ್ ಮುಖಂಡ ಟಿ. ಎಂ. ಶಹೀದ್ ತೆಕ್ಕಿಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರು ನೇಮಕಗೊಳಿಸಿರುತ್ತಾರೆ.
ಟಿ. ಎಂ. ಶಹೀದ್ ತೆಕ್ಕಿಲ್ NSUI ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ದುಡಿದಿರುತ್ತಾರೆ.
NSUI ಮತ್ತು ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿ, ಹಾಸನ, ಉತ್ತರಕನ್ನಡ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ, ಮಡಿಕೇರಿ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಜಿಲ್ಲೆಗಳಲ್ಲಿ ನಡೆದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿರುತ್ತಾರೆ. ಕೆಪಿಸಿಸಿಯ ಉಸ್ತುವಾರಿಯಾಗಿ ಹಾವೇರಿ ಜಿಲ್ಲೆಯ ಹಿರೆಕೆರೂರು ಮತ್ತು ಹಾನಗಲ್, ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದರು ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ರ ಪರವಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ವೀಕ್ಷಕರಾಗಿರುತ್ತಾರೆ.


ಟಿ. ಎಂ. ಶಹೀದ್ ರವರು ಎರಡು ಬಾರಿ ಸುಳ್ಯ ಕೆವಿಜಿ ಕಾನೂನು ಕಾಲೇಜಿನ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸೆನೆಟ್ ಆಯ್ಕೆ ಸಮಿತಿ ಸದಸ್ಯರಾಗಿ, ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿ ಯೂನಿಯನ್ ನ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಸರ್ವ ಕಾಲೇಜು ವಿದ್ಯಾರ್ಥಿ ಯೂನಿಯನ್ ನ ಉಪಾಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವ ಶಕ್ತಿ ಮತ್ತು ಗ್ರಾಮೀಣಾಭಿವೃದ್ಧಿ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಸುಳ್ಯ ತಾಲೂಕು ಅಲ್ಪ ಸಂಖ್ಯಾತರ ವಿವಿದ್ದೋದೇಶ ಸಹಕಾರಿ ಸಂಘದಲ್ಲಿ ಏಳುವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದಸ್ಯರಾಗಿ ಪ್ರಸ್ತುತ ಕರ್ನಾಟಕ ರಾಜ್ಯದ ರಾಜೀವ್ ಯೂತ್ ಫೌಂಡೇಶನ್ ನ ಅಧ್ಯಕ್ಷರಾಗಿರುವ ಇವರು ಸಂಪಾಜೆ ಗ್ರಾಮದ ಪೇರಡ್ಕ- ಗೂನಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿ , ಪ್ರಸ್ತುತ ಗೌರವಾಧ್ಯಕ್ಷರಾಗಿ ಮತ್ತು ಅರಂತೋಡು ಂಊಙಂ ಸಂಸ್ಥೆಯ ಗೌರವಾಧ್ಯಕ್ಷರಾಗಿ ೨೦ ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದಾರೆ.
ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಕಳೆದ ೩ ದಶಕಗಳಿಂದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಇವರು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.