ಐವರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

Advt_Headding_Middle

 

ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಸೇವೆ ಮಾಡಿ ಈಗ ಶಾಲೆಯಿಂದ ಬಡ್ತಿ ಪಡೆದ ಆಂಗ್ಲ ಭಾಷಾ ಶಿಕ್ಷಕರಾದ ಪ್ರೇಮಾ ಹಾಗೂ ವಿಜ್ಞಾನ ಶಿಕ್ಷಕರಾದ ಚಿದಾನಂದ ಕೆ. ಇವರಿಗೆ ಶಾಲಾ ವತಿಯಿಂದ ಬೀಳ್ಕೊಡುಗೆ ಸಮಾರಂಭ ಡಿ. 23 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಹಾಗೂ ವಾರ್ಡ್ ಸದಸ್ಯ ಸತೀಶ್ ಜಬಳೆ ಭಾಗವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಅಹಮದ್ ಇಸಾಕ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾದ ಸೂಫಿ ಪಿ.ಐ,  ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷೆ ಸ್ವರಾಜ್ಯ ಲಕ್ಷ್ಮಿ, ಗ್ರಾ.ಪಂ. ಸದಸ್ಯೆ ಮಮತಾ ಉದ್ದಂಪಾಡಿ, ಉಪನ್ಯಾಸಕ ವರ್ಗ, ಶಿಕ್ಷಕ ಬೋಧಕೇತರ ವರ್ಗ, ಪೋಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿ ಹಾಗೂ ಶಿಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಶಿಕ್ಷಕರಾದ ಶ್ರೀಮತಿ ಭವಾನಿ ಕೆ ಅವರು ಸ್ವಾಗತಿಸಿ, ವಿಜಯಾ ಕೆ ವಂದಿಸಿದರು. ಪ್ರಸನ್ನ ಕುಮಾರ್ ನಿರ್ವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.