Breaking News

ಕೆ.ವಿ.ಜಿ. ಐ.ಪಿ.ಎಸ್ .ನಲ್ಲಿ ಕ್ರಿಸ್ಮಸ್ ಆಚರಣೆ

Advt_Headding_Middle

 

ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕ್ರಿಸ್ ಮಸ್ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸುಂದರ ಸನ್ನಿವೇಶಕ್ಕೆ ಸಾಕ್ಷಿಯಾದ ಮಕ್ಕಳು, ಶಿಕ್ಷಕರು, ಬೋಧಕರು,ಬೋಧಕೇತರ ಸಿಬ್ಬಂದಿಗಳು ಹಾಗೂ ಪೋಷಕರಿಗೆ ಶಾಲೆಯ ಸಂಚಾಲಕರಾದ ಡಾ.ರೇಣುಕಾ ಪ್ರಸಾದ್ ಕೆ.ವಿ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಶಾಲೆಯ ಪ್ರಾಂಶುಪಾಲರಾದ  ಅರುಣ್ ಕುಮಾರ್ ದಿನದ ಪ್ರಾಮುಖ್ಯತೆಯನ್ನು ಈ ಸಂದರ್ಭದಲ್ಲಿ ತಿಳಿಸಿದರು. 5 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಹನಿಯಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳು ವಿವಿಧ ನೃತ್ಯ, ಹಾಡು, ಹಾಗೂ ಯೇಸು ಕ್ರಿಸ್ತರ ಜೀವನ, ಹುಟ್ಟು ಪ್ರೀತಿ, ಸಮಾನತೆ ಯನ್ನು ಜಗತ್ತಿಗೆ ಸಾರಿದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಈ ಕಾರ್ಯಕ್ರಮಕ್ಕೆ ಶಿಕ್ಷಕಿ ಶ್ವೇತಾ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.