Breaking News

ಆಲೆಟ್ಟಿ : ಸ್ವಚ್ಛತಾ ಮಾಹಿತಿ ಮತ್ತು ಶ್ರಮದಾನ

Advt_Headding_Middle

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಸಮಾಜಕಾರ್ಯ ವಿಭಾಗ ಮತ್ತು ರೋವರ್ಸ್ ರೇಂಜರ್ಸ್ ಘಟಕ, ಗ್ರಾಮ ಪಂಚಾಯಿತಿ ಹಾಗೂ ವಾಲ್ಮೀಕಿ ಆಶ್ರಮ ಶಾಲೆ ಆಲೆಟ್ಟಿ ಇದರ ಸಂಯುಕ್ತ ಆಶ್ರಯದಲ್ಲಿ ಡಿ.24ರಂದು ಸ್ವಚ್ಛತಾ ಮಾಹಿತಿ ಮತ್ತು ಶ್ರಮದಾನ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪುಷ್ಪವತಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ವಹಿಸಿದ್ದರು. ಕಾರ್ಯಕ್ರಮವನ್ನು ನೆಹರು ಮೆಮೋರಿಯಲ್ ಕಾಲೇಜು ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎಂ. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಉದ್ಘಾಟನಾ ಭಾಷಣವನ್ನು ಮಾಡಿದರು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿ ವೃಂದ, ಸೃಜನ್ ಸೆಕ್ರೆಟರಿ ಗ್ರಾಮ ಪಂಚಾಯತ್ ಆಲೆಟ್ಟಿ, ನೆಹರು ಮೆಮೋರಿಯಲ್ ಕಾಲೇಜಿನ ಅಧ್ಯಾಪಕರಾದ ಪ್ರೊಫೆಸರ್ ತಿಪ್ಪೇಸ್ವಾಮಿ, ವಿಷ್ಣು ಪ್ರಶಾಂತ್, ಮನೋಜ್ ಕುಮಾರ್ ಹಾಗೂ ಪೋಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರುಗಳು, ರೋವರ್ ರಂಜರ್ ಘಟಕದ ಸಂಚಾಲಕರಾದ ಉಮೇಶ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ. ಮಾಧವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಶೋಭಾ ಎ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಫರೀದಾ ಸ್ವಾಗತಿಸಿ, ಧನುಶ್ರೀ ವಂದಿಸಿದರು ಮೌನವಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಮತ್ತು ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳು ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಗುಂಪು ಚಟುವಟಿಕೆಗಳನ್ನು ಮತ್ತು ಸ್ವಚ್ಛತಾ ಶ್ರಮದಾನದಲ್ಲಿ ಭಾಗವಹಿಸಿದರು. ನೆಹರು ಮೆಮೋರಿಯಲ್ ಕಾಲೇಜು ಪ್ರಾಂಶುಪಾಲ ಪ್ರೊಫೆಸರ್ ರುದ್ರಕುಮಾರ್ ಎಂ.ಎಂ. ಇವರು ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಮತ್ತು ಹಣ್ಣು ಹಂಪಲನ್ನು ಹಂಚಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.