Breaking News

ಡಿ.28 : ಸುಳ್ಯ ನ್ಯಾಯಾಲಯದ ನ್ಯಾಯಾಧೀಶರ ವಸತಿಗೃಹಕ್ಕೆ ಶಿಲಾನ್ಯಾಸ

Advt_Headding_Middle

 

ಇಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಭೇಟಿ – ಪೂರ್ವಭಾವಿ ಸಭೆ

ದ.ಕ.ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ದ.ಕ.ಜಿಲ್ಲಾ ಲೋಕೋಪಯೋಗಿ ಇಲಾಖೆ ವತಿಯಿಂದ ಡಿ.28 ರಂದು ಸುಳ್ಯ ನ್ಯಾಯಧೀಶರ ವಸತಿ ಗೃಹ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದ್ದು ಡಿ.25 ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರಾದ ಮುರಳೀಧರ ಪೈ ಯವರು ನ್ಯಾಯಾಲಯಕ್ಕೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು.


ಬಳಿಕ ನ್ಯಾಯಾಧೀಶರ ವಸತಿ ಗೃಹದ ಸಮೀಪ ತೆರಳಿ ಸ್ಥಳ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಧೀಶ ಸೋಮಶೇಖರ್, ಕಿರಿಯ ನ್ಯಾಯಾಧೀಶ ಯಶವಂತ ಕುಮಾರ್ ಎ.ಪಿ.ಪಿ.ಜನಾರ್ಧನ್,ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಹಾಗೂ ವಕೀಲರು ಉಪಸ್ಥಿತರಿದ್ದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಚೆನ್ನಕೇಶವ ದೇವಸ್ಥಾನ ಭೇಟಿ : 
ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕವು ನಡೆಯಿಯ್ತಿದ್ದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಎಂ.ವೆಂಕಪ್ಪ ಗೌಡ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.