ಸುಳ್ಯ: ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮೂಲಕ ಸ್ಥಾಪಕರ ದಿನಾಚರಣೆ

Advt_Headding_Middle
Advt_Headding_Middle

 

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 93ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆಯನ್ನಾಗಿ ಕೆ.ವಿ.ಜಿ ಕ್ಯಾಂಪಸ್ ನಲ್ಲಿ ಡಿ. 26ರಂದು ನಡೆಯಿತು.
ಸ್ಥಾಪಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುರುಂಜಿ ಕುಟುಂಬಸ್ಥರಾದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ ಡಾ. ಕೆ.ವಿ. ಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಪುಷ್ಪ ನಮನಸಲ್ಲಿಸಿ ಕುರುಂಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು. ಶ್ರೀಮತಿ ಶೋಭ ಚಿದಾನಂದ, ಡಾ. ಜ್ಯೋತಿ ಆರ್. ಪ್ರಸಾದ್, ಅಕ್ಷಯ್ ಕೆ.ಸಿ. ಶ್ರೀಮತಿ ಪಾರ್ವತಿ ಅಕ್ಷಯ್, ಡಾ. ಐಶ್ವರ್ಯ, ಡಾ. ಗೌತಮ್, ಕು. ಅಭಿಜ್ಞಾ ಸೇರಿದಂತೆ ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಡಾ. ಕೆ.ವಿ.ಜಿಯವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಪೌಂಡರ್ಸ್ ಡೇ ಸಮಿತಿ ಅಧ್ಯಕ್ಷ, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ವಂದಿಸಿದರು. ಎನ್.ಎಂ.ಸಿ. ಉಪನ್ಯಾಸಕಿ ಬೇಬಿ. ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.