Breaking News

ಸಚಿವ ಅಂಗಾರರಿಂದ ಐವರ್ನಾಡು ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಸರಕಾರದಿಂದ ವಿಶೇಷ ಅನುದಾನ ಬಿಡುಗಡೆ

Advt_Headding_Middle

 

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸಚಿವರಿಂದ ವಿಶೇಷ ಅನುದಾನ

ಐವರ್ನಾಡು ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ ಸಚಿವ ಎಸ್. ಅಂಗಾರರು ರಾಜ್ಯ ಸರಕಾರದ ವತಿಯಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದಾರೆ.
ಐವರ್ನಾಡು – ದೇರಾಜೆ ರಸ್ತೆಯ ಅಭಿವೃದ್ಧಿಗಾಗಿ ಒಂದು ಕೋಟಿ, ಕಲ್ಲೋಣಿ – ಕುಳ್ಳಂಪಾಡಿ ರಸ್ತೆ ಅಭಿವೃದ್ಧಿಗೆ ಒಂದು ಕೋಟಿ, ಸವಣೂರು – ಮಾಡಾವು – ಸಿದ್ದಮೂಲೆ – ಮುಚ್ಚಿನಡ್ಕ ಸಂಪರ್ಕದ ಸುಮಾರು ನಾಲ್ಕೂವರೆ ಕಿ.ಮೀ. ರಸ್ತೆಯ ಅಭಿವೃದ್ಧಿಗಾಗಿ ಒಂದು ಕೋಟಿ ಹಾಗೂ ಐವರ್ನಾಡು – ನಿಡುಬೆ ರಸ್ತೆಯ ಅಭಿವೃದ್ಧಿಗಾಗಿ ಇಪ್ಪತ್ತೈದು ಲಕ್ಷ ರೂ . ವಿಶೇಷ ಅನುದಾನ ಬಿಡುಗಡೆಗೊಂಡಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರರು “ಸುದ್ದಿಗೆ ತಿಳಿಸಿದ್ದಾರೆ.

ಇದರಲ್ಲಿ ಸವಣೂರು – ಮಾಡಾವು – ಸಿದ್ಧಮೂಲೆ ಮುಚ್ಚಿನಡ್ಕ ರಸ್ತೆಯನ್ನು ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.