ಸುಳ್ಯ ನ್ಯಾಯಾಲಯದ ನ್ಯಾಯಾಧೀಶರ ವಸತಿ ಗೃಹ ನಿರ್ಮಾಣಕ್ಕೆ ಶಿಲಾನ್ಯಾಸ

Advt_Headding_Middle
Advt_Headding_Middle

ಶೀಘ್ರ ಸುಸಜ್ಜಿತ ನ್ಯಾಯಾಲಯ ಸಂಕೀರ್ಣ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆಶಯ

ಸುಳ್ಯದಲ್ಲಿ ನೂತನ ಸುಸಜ್ಜಿತ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗುವ ವಿಶ್ವಾಸವನ್ನು ಭಾರತ ಸರ್ಕಾರದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ವ್ಯಕ್ತಪಡಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ದ.ಕ. ಜಿಲ್ಲಾ ಲೋಕೋಪಯೋಗಿ ಇಲಾಖೆ ವತಿಯಿಂದ ಇಂದು ಸುಳ್ಯ ನ್ಯಾಯಾಧೀಶರ ವಸತಿಗೃಹ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಸುಳ್ಯಕ್ಕೆ ಈಗಾಗಲೇ ಮಂಜೂರುಗೊಮಡಿರುವ 16 ಕೋಟಿ ರೂ. ವೆಚ್ಚದ ನ್ಯಾಯಾಲಯ ಸಂಕೀಣ್ದ ಕೆಲಸ ಶೀಘ್ರ ಪೂರ್ಣಗೊಳ್ಳುವುದು ಕಷ್ಟವೇನಲ ಯಾಕೆಂದರೆ ನಮ್ಮಲ್ಲಿ ಈಗ ಅಂತಹ ತಂಡವಿದೆ ಎಂದು ಅಬ್ದುಲ್ ನಝೀರ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ದ.ಕ. ಜಿಲ್ಲಾ ಆಡಳಿತ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ನ್ಯಾಯಾಧೀಶರುಗಳಾದ ಮೊಹಮ್ಮದ್ ನವಾಝ್, ವಿಶ್ವಜಿತ್ ಶೆಟ್ಟಿ, ಹೈಕೋರ್ಟ್ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಭಾಗವಹಿಸಿದ್ದರು.
ಜಿಲ್ಲಾ ನ್ಯಾಯಾಧೀಶ ಮುರಳೀಧರ ಪೈ, ಹೈಕೋರ್ಟ್ ರಿಜಿಸ್ಟರ್ ಜನರಲ್ ಟಿ.ಜಿ. ಶಿವಶಂಕರೇ ಗೌಡ, ಲೋಕೋಪಯೋಗಿ ಇಲಾಖೆಯ ಕೇಂದ್ರ ವಲಯ ಚೀಫ್ ಇಂಜಿನಿಯರ್ ಕಾಂತರಾಜ ಬಿ.ಟಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಆರಂಭದಲ್ಲಿ ವಸತಿ ಗೃಹ ನಿರ್ಮಾಣಗೊಳ್ಳಲಿರುವ ಸ್ಥಳದಲ್ಲಿ ನ್ಯಾಯಮೂರ್ತಿಗಳು ಶಿಲಾನ್ಯಾಸ ನೆರವೇರಿಸಿದರು. ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ., ಕಿರಿಯ ನ್ಯಾಯಾಧೀಶ ಯಶವಂತ್‌ಕುಮಾರ್, ಎಪಿಪಿ ಜನಾರ್ಧನ್ ಸಹಕರಿಸಿದರು. ಬಳಿಕ ನ್ಯಾಯಮೂರ್ತಿಗಳು ಬಾರ್ ಅಸೋಸಿಯೇಸನ್ ಸಭಾಂಗಣಕ್ಕೆ ಆಗಮಿಸಿದರು.


ಕಾರ್ಯಕ್ರಮದಲ್ಲಿ ಎಲ್ಲಾ ಗಣ್ಯರನ್ನು ಸನ್ಮಾನಿಸಲಾಯಿತು. ಸುಳ್ಯ ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಸ್ವಾಗತಿಸಿದರು. ನ್ಯಾಯವಾದಿ ದಳ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯ ಆಗಮನದ ಹಿನ್ನಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.