ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ

Advt_Headding_Middle
Advt_Headding_Middle

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಅದಕ್ಕೆ ದಿಕ್ಸೂಚಿ : ಟಿ ಎಂ ಶಹೀದ್

 

” ಕರ್ನಾಟಕ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸೀಟುಗಳನ್ನು ಗೆದ್ದಿರುವುದು ರಾಜ್ಯಾದ್ಯಂತ ಕಾಂಗ್ರೆಸ್ ಅಲೆ ನಿರ್ಮಾಣವಾಗಿದೆ ಎಂಬುದಕ್ಕೆ ಸಾಕ್ಷಿ” ಎಂದು ಕೆಪಿಸಿಸಿ ವಕ್ತಾರ ಟಿ ಎಂ ಶಹೀದ್ ಹೇಳಿದ್ದಾರೆ.


ಇಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿರುವ ಮೇಕೆದಾಟು ಪಾದಯಾತ್ರೆಯ ಬಗ್ಗೆ ವಿವರ ನೀಡಿದರು
” ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಮೇಕೆದಾಟು ಪಾದಯಾತ್ರೆಯನ್ನು ಆಯೋಜಿಸಲಾಗುತ್ತಿದೆ. ಜನವರಿ 9 ರಂದು ಬೆಳಿಗ್ಗೆ ಮಂಡ್ಯದ ಹೆಗ್ಗನೂರುನಿಂದ ಆರಂಭವಾಗುವ ಈ ಪಾದಯಾತ್ರೆ ಹನ್ನೊಂದು ದಿನಗಳ ಕಾಲ ನಿರಂತರವಾಗಿ ನಡೆದು ಜನವರಿ ಹತ್ತೊಂಬತ್ತು ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪಗೊಳ್ಳಲಿದೆ. ಕಾಂಗ್ರೆಸ್ ಪಕ್ಷದ ಮುಖಂಡರಲ್ಲದೆ, ಸಾಹಿತಿಗಳು, ಎಲ್ಲಾ ಧರ್ಮಗಳ ಸ್ವಾಮೀಜಿಗಳು, ಕನ್ನಡ ಚಳವಳಿ ನಾಯಕರುಗಳು, ಇತರ ಪಕ್ಷಗಳ ರಾಜಕಾರಣಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ” ಎಂದು ಅವರು ಹೇಳಿದರು.

” ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಾವಣೆ ಕಾರ್ಯ ಆರಂಭಗೊಂಡಿದ್ದು ಹನ್ನೆರಡು ವರ್ಷಗಳ ನಂತರ ಈ ಕಾರ್ಯ ನಡೆಯುತ್ತಿದೆ. ಪಕ್ಷದ ತತ್ತ್ವ ಸಿದ್ಧಾಂತ ಒಪ್ಪಿದ ಎಲ್ಲರು ಕೂಡ 5 ರೂ. ಕೊಟ್ಟು ಕಾಂಗ್ರೆಸ್ ಸದಸ್ಯರಾಗಬಹುದು. ಏಪ್ರಿಲ್ ನಲ್ಲಿ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ನೇಮಕವಾಗಲಿದೆ ” ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸದಾನಂದ ಮಾವಜಿ, ಸಿದ್ದಿಕ್ ಕೊಕ್ಕೊ, ಹನೀಫ್ ಬೀಜಕೊಚ್ಚಿ ಮತ್ತಿತರರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.