ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು, ಗುತ್ತಿಗಾರು ವಲಯದ ದೇವಚಳ್ಳ ಗ್ರಾಮದ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ದೈವಸ್ಥಾನ ಸರಳಾಡಿಚಾವಡಿ ದೇವ ಇದರ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ದಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ದೇವ ಒಕ್ಕೂಟದ ಸದಸ್ಯರು ಶ್ರಮದಾನ ಮಾಡುವುದರ ಮುಖಾಂತರ ಜ.12ರಂದು ನೆರವೇರಿಸಿದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಮುರಳಿಧರ, ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಕೃಷ್ಣ ಗೌಡ ದೇವ , ನೇಮೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಪಾಲೆಪ್ಪಾಡಿ, ಕಾರ್ಯದರ್ಶಿ ರಾಮಚಂದ್ರ ಆಚಾರ್ಯ, ಒಕ್ಕೂಟದ ಅಧ್ಯಕ್ಷರಾದ ನಳಿನಾಕ್ಷ ಹಿರಿಯಡ್ಕ, ಒಕ್ಕೂಟದ ಉಪಾಧ್ಯಕ್ಷರಾದ ಯೋಗೀಶ್ ದೇವ, ಸೇವಾ ಪ್ರತಿನಿಧಿ ತಿಮ್ಮಪ್ಪ ಕಡ್ಯ ಸೇರಿದಂತೆ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.