ಅಮರ ಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸಾಮಾನ್ಯ ಚುನಾವಣೆಯು ಜ. 31ರಂದು ನಡೆಯಲಿರುವುದು. ಜ 19ರಿಂದ 23 ತನಕ ನಾಮಪತ್ರ ಸಲ್ಲಿಸಲು ಅವಕಾಶವಿದ್ದು ಕಚೇರಿ ಸಮಯದಲ್ಲಿ ಅಪರಾಹ್ನ 2 ಗಂಟೆಯಿಂದ 5 ರ ತನಕ ನಾಮಪತ್ರವನ್ನು ಕಚೇರಿ ಸಮಯದಲ್ಲಿ ಖುದ್ದಾಗಿ ಸಲ್ಲಿಸಲು ಅವಕಾಶವಿರುವುದು ಎಂದು ರಿಟರ್ನಿಂಗ್ ಅಧಿಕಾರಿ ಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.