ಇಂದು ಬೆಳಿಗ್ಗೆ ದರ್ಶನ ಬಲಿ,ಬಟ್ಟಲು ಕಾಣಿಕೆ
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯು ಜ.16 ರಂದು ಪ್ರಾರಂಭಗೊಂಡಿತು.
ಇಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ಪ್ರಾರಂಭಗೊಂಡಿತು.
ಶ್ರೀ ಉಳ್ಳಾಕುಲು ದೈವದ ಭಂಡಾರ ದೇವಸ್ಥಾನಕ್ಕೆ ಆಗಮಿಸಿತು.
ಶ್ರೀ ದೇವರ ದರ್ಶನ ಬಲಿ ಪ್ರಾರಂಭಗೊಂಡಿತು.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪ್ರಮುಖರಾದ ಅಮರನಾಥ ಶೆಟ್ಟಿ ಪೆರುವಾಜೆಗುತ್ತು, ಬೋಜರಾಜ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಭಾಗ್ಯಲಕ್ಷ್ಮೀ ಅರ್ನಾಡಿ, ಯಶೋಧಾ ಎ.ಎಸ್, ಭಕ್ತಾದಿಗಳು ಉಪಸ್ಥಿತರಿದ್ದರು.
ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ.
ನಂತರ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ವಸಂತಕಟ್ಟೆ ಪೂಜೆ ನಡೆಯಲಿದೆ.