ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ 2021-22ನೇ ಸಾಲಿನ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಕುರಿತಾಗಿ ಮತ್ತು ನಮ್ಮ ಗ್ರಾಮ ನಮ್ಮ ಯೋಜನೆ 2022-23ರ ಪಂಚಾಯತ್ ಅಭಿವೃದ್ಧಿ ಯೋಜನೆ ಸಿದ್ಧಪಡಿಸುವ ಕುರಿತು ವಿಶೇಷ ಗ್ರಾಮ ಸಭೆ ರಾಜೀವ ಗಾಂಧಿ ಸೇವಾ ಕೇಂದ್ರ ಸಭಾಂಗಣದಲ್ಲಿ ಜ. 17 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು. ನಮ್ಮ ಗ್ರಾಮ ನಮ್ಮ ಯೋಜನೆ ನೋಡಲ್ ಅಧಿಕಾರಿಯಾಗಿ ಹನುಮಂತರಾಯಪ್ಪ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಭಾಗವಹಿಸಿದ್ದರು.
ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಅನುಷಾ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು , ವಸತಿ ಫಲಾನುಭವಿಗಳು, ಅಂಗನವಾಡಿ ಕಾರ್ಯಕರ್ತೆಯರು ,ಶಾಲ ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.