ಐವರ್ನಾಡು ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಕುರಿತಾಗಿ ಮತ್ತು ನಮ್ಮ ಗ್ರಾಮ ನಮ್ಮ ಯೋಜನೆ 2022 – 23ರ ಪಂಚಾಯತ್ ಅಭಿವೃದ್ಧಿ ಯೋಜನೆ ಸಿದ್ಧಪಡಿಸುವ ಕುರಿತು ವಿಶೇಷ ಗ್ರಾಮ ಸಭೆಯು ಗ್ರಾಮ ವಿಕಾಸ ಸಭಾಭವನದಲ್ಲಿ ಜ. 18 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ವಹಿಸಿದ್ದರು.
ನಮ್ಮ ಗ್ರಾಮ ನಮ್ಮ ಯೋಜನೆ ನೋಡಲ್ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಶೈಲಜಾರವರು ನೋಡೆಲ್ ಅಧಿಕಾರಿಯಾಗಿದ್ದರು.
ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು , ವಸತಿ ಫಲಾನುಭವಿಗಳು, ಅಂಗನವಾಡಿ ಕಾರ್ಯಕರ್ತೆಯರು ,ಶಾಲಾ ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.