ಸಂಪಾಜೆ ಗ್ರಾಮ ಪಂಚಾಯತಿಯ 5ನೇ ವಾರ್ಡ್ ದಂಡಕಜೆ ರಸ್ತೆಯು ಕಳೆದ ಮೂರ್ನಾಲ್ಕು ವರ್ಷಗಳಿಂದ ತೀರಾ ನಾದುರಸ್ತಿಯಲ್ಲಿದ್ದು, ವಾಹನ ಸಂಚಾರ ಹಾಗೂ ಕಾಲ್ನಡಿಗೆಗೂ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದು, ಈ ಭಾಗದ ಜನಪ್ರತಿನಿಧಿಗಳ ಅಸಡ್ಡೆಯೇ ಪ್ರಮುಖ ಕಾರಣವಾಗಿರುತ್ತದೆ.
ಹತ್ತಕ್ಕಿಂತಲೂ ಹೆಚ್ಚಿನ ಕುಟುಂಬಗಳು ಈ ರಸ್ತೆಯನ್ನು ಅವಲಂಬಿಸಿದ್ದು, ತೀರಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ.
ಆದ್ದರಿಂದ ಈ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕ ಸಂಚಾರಕ್ಕೆ ಅನು ಮಾಡಿಕೊಡಬೇಕೆಂದು ಎಸ್ .ಡಿ.ಪಿ .ಐ. ಸಂಪಾಜೆ ವತಿಯಿಂದ, ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಮನವಿ ನೀಡಲಾಯಿತು. ತಕ್ಷಣ ಸ್ಪಂದಿಸಿದ ಪಿಡಿಒ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು.