ಜಾಲ್ಸೂರು ಗ್ರಾಮ ಪಂಚಾಯತಿ ಡಿಜಿಟಲ್ ಗ್ರಂಥಾಲಯಕ್ಕೆ ಸುಳ್ಯ ಆನಂದ ಇಲೆಕ್ಟ್ರಾನಿಕ್ಸ್ ಮಾಲಕ ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಲ.ಆನಂದ ಪೂಜಾರಿ ಅವರು ಒಂದು ಸೀಲಿಂಗ್ ಫ್ಯಾನನ್ನು ಕೊಡುಗೆಯಾಗಿ ಜ.28ರಂದು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಹಾಗೂ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಚಿತ್ರ ಕುಕ್ಕಂದೂರು ಅವರಿಗೆ ಹಸ್ತಾಂತರಿಸಿದರು.
ಕನಕಮಜಲು ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಎರಡು ಸೀಲಿಂಗ್ ಫ್ಯಾನ್ ಹಾಗೂ ಉದ್ಯಮಿ ಶ್ರೀನಿವಾಸ ಭಟ್ ಜಾಲ್ಸೂರು ಅವರು ಒಂದು ಸೀಲಿಂಗ್ ಫ್ಯಾನನ್ನು ಈ ಸಂದರ್ಭದಲ್ಲಿ ಗ್ರಾ.ಪಂ. ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿ ಸಮೂಹ ಮಾಧ್ಯಮ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ.ಶಿವಾನಂದ, ದ.ಕ. ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಹರೀಶ್ ಕಂಜಿಪಿಲಿ, ಗ್ರಂಥಾಲಯ ಎನ್.ಜಿ.ಒ. ಮುರಳೀಧರ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ. ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.