ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ ಸಿ.ಎಸ್.ಸಿ ಕೇಂದ್ರ ಉದ್ಘಾಟನೆಯು ಜ.28 ರಂದು ನಡೆಯಿತು. ತಾಲೂಕಿನ ಯೋಜನಾಧಿಕಾರಿ ಚೆನ್ನಕೇಶವರವರು ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಮಹೇಶ್ ರೈ ಮೇನಾಲ, ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಪ್ರಭೋಧ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸುದೀರ್ ರೈ, ಒಕ್ಕೂಟ ಅಧ್ಯಕ್ಷರಾದ ಸೋಮನಾಥ , ವಲಯ ಮೇಲ್ವಚಾರಕಿ ಶ್ರೀಮತಿ ಹೇಮಲತಾ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಭಾರತಿ ಸೌಮ್ಯ ಉಪಸ್ಥಿತರಿದ್ದರು.