ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಚಿವ ಎಸ್ ಅಂಗಾರರಿಗೆ ಸನ್ಮಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಮೇ-೨೦ರಂದು ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಗೆ ಆಗಮಿಸಿದ ಕರ್ನಾಟಕ ಸರಕಾರದ ಮೀನುಗಾರಿಕ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಹಾಗೂ ಉಪನ್ಯಾಸಕ ವೃಂದ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಕಾಲೇಜಿನ ಅಭಿವೃದ್ಧಿ ಕುರಿತಾದ ಸಭೆ ನಡೆಸಲಾಯಿತು. ಸಚಿವರು ನಂತರ ಕಾಲೇಜಿನ ಹೊಸ ಕಟ್ಟಡಗಳ ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪುರುಷೋತ್ತಮ ಕಿರ್ಲಾಯ, ಮಾಧವ ಗೌಡ ಮಡಪ್ಪಾಡಿ, ಜಿ.ಜಿ ನಾಯಕ್, ಹರೀಶ್ ರೈ ಉಬರಡ್ಕ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ವಸಂತ ಬೀರಮಂಗಲ, ಚಂದ್ರಶೇಖರ ಪಿ.ಆರ್ ಸೆಂಚುರಿ, ನಾರಾಯಣ ರಾವ್ ಕೊಡಿಯಾಲಬೈಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಸ್ವಾಗತಿಸಿ ಂದಿ ಉಪನ್ಯಾಸಕ ರಾಮಕೃಷ್ಣ ಕೆ ವಂದಿಸಿ ಕಾರ್‍ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.