ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಆಶ್ರಯದಲ್ಲಿರುವ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಪ್ರೊಫೆಸರ್ ಆಗಿರುವ ಡಾ. ಕುಸುಮಾಧರ ಎಸ್. ರವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ. ಯವರು ನೇಮಕಗೊಳಿಸಿದ್ದಾರೆ.
ಇವರು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಕಳೆದ 22 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಅಲ್ಲದೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಇಲ್ಲಿ ಡಾಕ್ಟರೇಟ್ ಪದವಿ ಪಡೆದಿರುತ್ತಾರೆ. ಇವರು ಎ. ದೇವಪ್ಪ ಗೌಡ, ಸಂಕಡ್ಕ ಮತ್ತು ಶ್ರೀಮತಿ ಹೊನ್ನಮ್ಮ ದಂಪತಿಗಳ ಪುತ್ರ. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇ&ಅ ರಿಸರ್ಚ್ ಸೆಂಟರಿನಲ್ಲಿ ಅಭ್ಯಸಿಸಿ ಮಂಡಿಸಿದ “Soft Computing Techniques for Grading Arecanut of South Canara District” ಸಂಶೋಧನೆಗೆ ವಿ.ಟಿ.ಯು. ಬೆಳಗಾವಿ ಇದರಿಂದ ಪಿ.ಹೆಚ್.ಡಿ. ಪದವಿಯನ್ನು ಪಡೆದಿರುತ್ತಾರೆ.