ಸುಬ್ರಮಣ್ಯ ಗ್ರಾಮ ಪಂಚಾಯತ್ ನಿಂದ ವಿಕಲಚೇತನ ಫಲಾನುಭವಿಗಳಿಗೆ 2021- 22 ನೇ ಸಾಲಿನ ವಿಕಲಚೇತನ ಸೌಲಭ್ಯ ವಿತರಣೆ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಗಳ ಮನೆ ಮಂಜೂರಾತಿಯಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ವಿತರಣೆ ಕಾರ್ಯಕ್ರಮವು ಮೇ.31 ರಂದು ನಡೆಯಿತು.
ಗ್ರಾ. ಪಂ. ಅಧ್ಯಕ್ಷ ಲಲಿತಾ ಗುಂಡಡ್ಕ ಅಧ್ಯಕ್ಷತ ವಹಿಸಿದ್ದರು. ಫಲಾನುಭವಿಗಳಿಗೆ ಕಾಮಗಾರಿ ಆದೇಶ ಹಾಗೂ ವಿಕಲಚೇತನರಿಗೆ ಸೌಲಭ್ಯವನ್ನು ನೀಡಲಾಯಿತು. ಆಡಳಿತ ಮಂಡಳಿ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.