ವಿಶ್ವ ತಂಬಾಕು ರಹಿತ ದಿನಾಚರಣೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ತಂಬಾಕು ದಿನಾಚರಣೆಯನ್ನು ತಂಬಾಕು ಮುಕ್ತ ಸಮಾಜವನ್ನು ನಿರ್ಮಿಸುವಂತೆ ಜನಸಮುದಾಯಕ್ಕೆ ಮಾಹಿತಿ ನೀಡುವುದರೊಂದಿಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ಪ್ರತಿಜ್ಞಾ ವಿಧಿ ಭೋದಿಸುವುದರೊಂದಿಗೆ ,ಇಲಾಖಾ ಸಿಬ್ಬಂದಿಗಳಿಗೆ ಮಾಹಿತಿ ನೀಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ತಾಲೂಕು ಆಸ್ಪತ್ರೆಯ ಡಾ .ಕರುಣಾಕರರವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ .ನಂದಕುಮಾರ್ ವಹಿಸಿದ್ದರು .ತಂಬಾಕು ಪರಿಸರಕ್ಕೆ ಅಪಾಯ ಅನ್ನುವ ಘೋಷಣೆಯೊಂದಿಗೆ ,ತಂಬಾಕು ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ಅರೋಗ್ಯ ಇಲಾಖೆಯ ಕ್ಷೇತ್ರ ಮಟ್ಟದ ಅರೋಗ್ಯ ಸಿಬ್ಬಂದಿಗಳು ಜನರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಆರೋಗ್ಯಾಧಿಕಾರಿ ಡಾ .ನಂದಕುಮಾರ್ ಸಭೆಗೆ ತಿಳಿಸಿದರು .ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಈ ಕುರಿತು ಸಂಪೂರ್ಣ ಮಾಹಿತಿ ನೀಡಿ ,ಪ್ರತಿಜ್ಞಾ ವಿಧಿ ಭೋದಿಸಿದರು .ವೇದಿಕೆಯಲ್ಲಿ ಅತಿಥಿಗಳಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಚರ್ಮ ಮತ್ತು ಲೈಂಗಿಕ ರೋಗ ತಜ್ಞರಾದ ಡಾ .ನವೀನ ವಿ ,ಡಾ .ರಾಜೇಶ್ವರಿ ,ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಭಾಸ್ಕರ ರಾವ್ ಉಪಸ್ಥಿತರಿದ್ದರು .ತಾಲೂಕು ಹಿರಿಯ ಸುರಕ್ಷಾಧಿಕಾರಿ ಹಿಮಲೇಶ್ವರಿ ಸ್ವಾಗತಿಸಿ , ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್ ವಂದಿಸಿದರು .ಪ್ರಾಥಮಿಕ ಆರೋಗ್ಯಕೇಂದ್ರಗಳ ವೈದ್ಯಾಧಿಕಾರಿಗಳು ,ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .