ಲಂಚ ಭ್ರಷ್ಟಾಚಾರ ನಿರ್ಮೂಲನೆಯ ಬಗ್ಗೆ ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ನಿರ್ಣಯ
ಸುದ್ದಿ ಜನಾಂದೋಲನದ ಮೂಲಕ ನಡೆಯುತ್ತಿರುವ ಲಂಚ ಭ್ರಷ್ಟಾಚಾರ ನಿರ್ಮೂಲನಾ ಆಂದೋಲನದ ಹಿನ್ನೆಲೆಯಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಲಂಚ ಭ್ರಷ್ಟಾಚಾರ ನಿರ್ಮೂಲನೆಯ ನಿರ್ಣಯ ಕೈಗೊಳ್ಳಲಾಯಿತು.
ಮರ್ಕಂಜ ಗ್ರಾಮಸ್ಥರಲ್ಲಿ ಯಾರಾದರೂ ಲಂಚಕ್ಕೆ ಬೇಡಿಕೆ ಇಟ್ಟರೆ ಆ ಬಗ್ಗೆ ಆಡಳಿತದ ಗಮನಕ್ಕೆ ತರಬೇಕು. ಅದನ್ನು ಗ್ರಾಮ ಪಂಚಾಯತ್ ಆಡಳಿತ ಆ ಬಗ್ಗೆ ಪ್ರಶ್ನಿಸಿ ಲಂಚ ರಹಿತವಾಗಿ ಕೆಲಸ ಮಾಡಿಸಿಕೊಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಅದಕ್ಕಾಗಿ ಗ್ರಾಮಸ್ಥರು ಲಂಚ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಕೈಜೋಡಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಸದಸ್ಯರಾದ ಚಿತ್ತರಂಜನ್ ಕೋಡಿ, ನಾಗವೇಣಿ ಶೆಟ್ಟಿಮಜಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಹಾಗೂ ಸಂಘಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.