ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ, ಶಾಲಾ ಅಭಿವೃದ್ಧಿ ಸಮಿತಿಯ ಸಹಕಾರದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದ ಲ್ಲಿ ಪೂರ್ವ ಪ್ರಾಥಮಿಕ ತರಗತಿಯು ಜೂ.3ರಂದು ಉದ್ಘಾಟನೆಗೊಂಡಿತು.
ಎಲ್ ಕೆ ಜಿ, ಯು ಕೆ ಜಿ ತರಗತಿ ಕೊಠಡಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್. ಪಿ. ಮಹಾದೇವರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ನಂತರ ನಡೆದ
ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಲೋಚನ ದೇವ ದೀಪ ಬೆಳಗಿಸಿ ತರಗತಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಚಳ್ಳ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸವಿತಾರವರು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಸಮೂಹ ಸಂಪನ್ಮೂಲ ವ್ಯಕ್ತಿ ಸಂತೋಷ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ. ವಿ ಹರಿಪ್ರಸಾದ್ ಎಲಿಮಲೆ, ಸರಕಾರಿ ಪ್ರೌಢ ಶಾಲೆ ಎಲಿಮಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಂತ ಹರ್ಲಡ್ಕ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕರಾದ ಶ್ರೀಧರ ಗೌಡ ಸ್ವಾಗತಿಸಿ, ಶಿಕ್ಷಕಿ ನಯನರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಜೀವನ್ ತಳೂರುರವರು ವಂದಿಸಿದರು.