ತೋಟಗಾರಿಕೆ ಇಲಾಖೆ ಸಸ್ಯ ಸಂರಕ್ಷಣಾ ಔಷಧಿ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

೨೦೨೨-೨೩ ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ಸಸ್ಯ ಸಂರಕ್ಷಣಾ ಔಷಧಿ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಬೆಳೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಅಧಿಕೃತ/ GST ನಂಬರ್ ಹೊಂದಿರುವ ಸಂಸ್ಥೆಯಿಂದ ಸಸ್ಯ ಸಂರಕ್ಷಣಾ ಔಷಧಿ (ಮೈಲುತುತ್ತು) ಖರೀದಿಸಿದ ಬಿಲ್ಲಿನೊಂದಿಗೆ ನಿಗಧಿತ ಅರ್ಜಿ ನಮೂನೆಯಲ್ಲಿ ದಿನಾಂಕ ೧೫-೦೬-೨೦೨೨ ರೊಳಗೆ ಇಲಾಖೆಗೆ ಸಲ್ಲಿಸಿದಲ್ಲಿ ಶೇ.೯೦ ಸಹಾಯಧನ ನೀಡಲಾಗುವುದು.
ಅರ್ಜಿಯೊಂದಿಗೆ ಅರ್ಜಿ ನಮೂನೆ, ಆರ್.ಟಿ.ಸಿ.ದಾರರ ಹೆಸರಿನಲ್ಲಿ ಜಿ.ಎಸ್.ಟಿ. ನಂಬರ್/ಅಧೀಕೃತ ಸಂಸ್ಥೆಯಿಂದ ಮೈಲುತುತ್ತು ಖರೀದಿಸಿದ ಮೂಲಬಿಲ್ಲು , ಆರ್.ಟಿ.ಸಿ.ಯಲ್ಲಿ ಅಡಿಕೆ ಬೆಳೆ ನಮೂದಿಸಿರಬೇಕು. ಇಲ್ಲದಿದ್ದಲ್ಲಿ ಬೆಳೆ ದೃಢೀಕರಣ ಪತ್ರ ಮತ್ತು ಜಂಟಿ ಖಾತೆ ಹೊಂದಿದ್ದಲ್ಲಿ, ಉಳಿಕೆದಾರರಿಂದ ಒಪ್ಪಿಗೆ/ಜಿ.ಪಿ.ಎ. ಪತ್ರ, ಚಾಲ್ತಿಯಲ್ಲಿರುವ ಅರ್ಜಿದಾರರ ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಮತದಾರರ ಗುರುತು ಚೀಟಿ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕೆಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

೨೦೨೨-೨೩ ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪರಿಶಿಷ್ಟ ಜಾತಿ ರೈತರಿಗೆ ಉಡುಪಿ ಮಲ್ಲಿಗೆ ಸಸಿಗಳು ಲಭ್ಯವಿದ್ದು ಆಸಕ್ತ ರೈತರು, ಪಹಣಿ ಪತ್ರ, ವೊಟರ್ ಐಡಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಅರ್ಜಿ ನೀಡಿ ಪಡೆದುಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ ವರ್ಗದವರಿಗೆ ೫೦೦ ಗಿಡಗಳು ಲಭ್ಯವಿರುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪರಿಶಿಷ್ಟ ಪಂಗಡ ರೈತರಿಗೆ ೪೦೦೦ ಕಾಳುಮೆಣಸು ಸಸಿ ಹಾಗೂ ೯೦೦ ಗೇರು ಗಿಡಗಳು ಲಭ್ಯವಿದ್ದು ಆಸಕ್ತ ರೈತರು, ಪಹಣಿ ಪತ್ರ, ವೊಟರ್ ಐಡಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಅರ್ಜಿ ನೀಡಿ ಪಡೆದುಕೊಳ್ಳಬಹುದಾಗಿದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.