ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಜೂನ್ 4ರಿಂದ 6ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ದೇವರ ಶಿಲಾ ವಿಗ್ರಹ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವವು ಎನ್. ಕೇಶವ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು.
ಆ ಪ್ರಯುಕ್ತ ಮೂರು, ನಾಲ್ಕು ಗ್ರಾಮಗಳಿಂದ ಹಸಿರು ಹೊರೆಕಾಣಿಕೆ ಹರಿದುಬಂತು. ಶಾಂತಿನಗರ ಜಂಕ್ಷನ್ ನಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಂತರ ಮೆರವಣಿಗೆಯು ದೇವಳಕ್ಕೆ ಸಾಗಿಬಂತು. ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಹಾಗೂ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಮಿತಿ ಅಧ್ಯಕ್ಷ ವಸಂತ ನಡುಬೈಲುರವರು ತೆಂಗಿನಕಾಯಿ ಒಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದೇವಳದಲ್ಲಿ ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಗುರು ಗಣಪತಿ ಪೂಜೆ, ಪುಣ್ಯಾಹವಾಚನ ಅಂಕುರಾರ್ಪಣೆ, ಕುಂಕುಮ ಧಾರಣೆ, ಧಾರ್ಮಿಕ ಕಾರ್ಯಕ್ರಮ ನಡೆಯಿತು ಬಳಿಕ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಕು. ಜಾನಕಿ ಮುರುಳ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ, ಅನುವಂಶಿಕ ಆಡಳಿತ ಮೊಕ್ತೇಸರರಾದ ಜನಾರ್ದನ ಆಚಾರ್ಯ, ಆಡಳಿತ ಸಮಿತಿ ಅಧ್ಯಕ್ಷ ಧನಂಜಯ ಆಚಾರ್ಯ ಏನೆಕಲ್ಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವೀಂದ್ರ ಆಚಾರ್ಯ ಇಳಂತಿಲ ಗೌರವಾಧ್ಯಕ್ಷ ಬಾಲಕೃಷ್ಣ ಮರೋಳಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು, ಕಾರ್ಯದರ್ಶಿ ಮಧುಚಂದ್ರ ಆಚಾರ್ಯ, ಕಾರ್ಯಾಧ್ಯಕ್ಷ ರವಿ ಆಚಾರ್ಯ ಪ್ರಧಾನರಾದ ಬಾಲಕೃಷ್ಣ ಪುರೋಹಿತ್ ಕುಕ್ಕಟ್ಟೆ, ಗೋಪಾಲಕೃಷ್ಣ, ಪುರೋಹಿತ್ ಕುಕ್ಕಟ್ಟೆ, ರಮೇಶ್ ಆಚಾರ್ಯ ಕುಕ್ಕಟ್ಟೆ, ಚಿನ್ನಯ್ಯ ಆಚಾರ್ಯ ಕುಕ್ಕಟ್ಟೆ, ಸುಧಾಕರ ಆಚಾರ್ಯ, ಈಶ್ವರ ಆಚಾರ್ಯ ಕಲ್ಲುಗುಂಡಿ, ಅನಂತ ಆಚಾರ್ಯ ಕಳಂಜ, ಶೇಷಪ್ಪ ಆಚಾರ್ಯ ಕಲ್ಲಗದ್ದೆ, ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ, ಸುಜಿತ್ ಆಚಾರ್ಯ ಕುಕ್ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.