Breaking News

ಸುಳ್ಯದಲ್ಲಿ ವಸತಿ ಯೋಜನೆ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಮಯಕ್ಕೆ ಸರಿಯಾಗಿ ಕೆಲಸ ನಿರ್ವಹಿಸಿ : ಸಚಿವ ಅಂಗಾರ

 

“ವಸತಿ ಯೋಜನೆಯ ಫಲಾನುಭವಿಗಳು ತಡ ಮಾಡದೇ ನಿಗದಿತ ಸಮಯಕ್ಕೆ ಸರಿಯಾಗಿ ಕೆಲಸ ನಿರ್ವಹಿಸಬೇಕು” ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬಸವ ವಸತಿ ಹಾಗೂ ಅಂಬೇಡ್ಕರ್ ವಸತಿ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ಕಾರ್ಯಾದೇಶ ಪತ್ರವನ್ನು ವಿತರಿಸಿ ಸಚಿವರು

“ಗ್ರಾ.ಪಂ. ಗಳಿಗೆ ಈಗ ನೀಡಿರುವ ವಸತಿ ಯೋಜನೆಯಲ್ಲದೆ ಹೆಚ್ಚುವರಿ ವಸತಿಯ ಬೇಡಿಕೆ ಇದ್ದರೆ ವಾರದೊಳಗೆ ಪಟ್ಟಿ ನೀಡಬೇಕು. ಸರಕಾರದಿಂದ ವಸತಿ ಮಂಜೂರುಗೊಳಿಸಲಾಗುವುದು ಎಂದು ಪಿ.ಡಿ.ಒ. ಗಳಿಗೆ ಸಚಿವರು ಸೂಚನೆ ನೀಡಿದರು

617 ಮಂದಿ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಲಾಯಿತು. ಆಯಾ ಪಂಚಾಯತ್ ಫಲಾನುಭವಿಗಳು ಕಾರ್ಯಾದೇಶ ಪತ್ರ ಪಡೆಯುವ ಸಂದರ್ಭ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷ ರು, ಸದಸ್ಯರು ವೇದಿಕೆಯಲ್ಲಿ ಇದ್ದರು.

ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ಬಸವನಪಾದೆ, ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ, ಅಮರಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಪದ್ಮಪ್ರಿಯ, ಅರಂತೋಡು ಗ್ರಾ.ಪಂ. ಅಧ್ಯಕ್ಷೆ ಹರಿಣಿ ದೇರಾಜೆ, ಕೊಲ್ಲಮೊಗ್ರ ಗ್ರಾ.ಪಂ. ಅಧ್ಯಕ್ಷ ಉದಯ ಕೊಪ್ಪಡ್ಕ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಬಾಬು ಕೆ.ಎಂ. ಜಾಲ್ಸೂರು, ಉಪಾಧ್ಯಕ್ಷೆ ಲೀಲಾವತಿ, ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಮಂಡೆಕೋಲು ಉಪಾಧ್ಯಕ್ಷ ಅನಿಲ್ , ಸದಸ್ಯ ಬಾಲಚಂದ್ರ ದೇವರಗುಂಡ, ಐವರ್ನಾಡು ಗ್ರಾ .ಪಂ. ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ನೆಲ್ಲೂರು ಕೆಮ್ರಾಜೆ ಅಧ್ಯಕ್ಷೆ ಶೀಲಾವತಿ, ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ, ಉಬರಡ್ಕ ಗ್ರಾ.ಪಂ. ಅಧ್ಯಕ್ಷೆ ಚಿತ್ರ ಕುಮಾರಿ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ,ದೇವಚಳ್ಳ ಗ್ರಾ.ಪಂ. ಉಪಾಧ್ಯಕ್ಷೆ ರಾಜೇಶ್ವರಿ, ಪಂಜ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ, ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಮೊದಲಾದವರಿದ್ದರು. ಇ.ಒ.‌ಭವಾನಿಶಂಕರ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.