ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.6ರಂದು ಆಚರಿಸಲಾಯಿತು.
ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಶಾಲಾ ಸಹಶಿಕ್ಷಕಿ ಶ್ರೀಮತಿ ಪೂರ್ಣಿಮಾ ಅವರು ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಸೇರಿದಂತೆ ಶಾಲಾ ಸಹಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.