ಸಚಿವ ಎಸ್. ಅಂಗಾರ ಭಾಗಿ
ಅಜ್ಜಾವರ ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಚುನಾಯಿತ ಜನಪ್ರತಿನಿಧಿಗಳ ಪ್ರಶಿಕ್ಷಣವರ್ಗದ ಸಭೆಯು ಕನಕಮಜಲಿನ ಶ್ರೀ ಆತ್ಮರಾಮ ಸಭಾಭವನದಲ್ಲಿ ಜೂ.7ರಂದು ಜರುಗಿತು.
ಕಾರ್ಯಕ್ರಮವನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಅಜ್ಜಾವರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಪ್ರ.ಕಾರ್ಯದರ್ಶಿ ಹೇಮಂತ್ ಮಠ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಅಧ್ಯಕ್ಷತೆ ವಹಿಸಿದ್ದರು. ಪಕ್ಷ ಹಾಗೂ ಸಂಘಟನೆಯ ಕುರಿತು ಸಚಿವರು ಮಾತನಾಡಿದರು.
ಜನಪ್ರತಿನಿಧಿಗಳು ಮತ್ತು ಸಂಘಟನೆಯ ಕುರಿತಾಗಿ ಮಂಡಲ ಸಮಿತಿಯ ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಅವರು ಮಾತನಾಡಿದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ ರಾವ್ ಬಪ್ಪಳಿಕೆ ಅವರು ಬಿಜೆಪಿ ಬೆಳೆದುಬಂದ ದಾರಿಯ ಕುರಿತಾಗಿ ಮಾತನಾಡಿದರು.
ವೇದಿಕೆಯಲ್ಲಿ ಮಂಡಲ ಸಮಿತಿ ಪ್ರ.ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಜಯರಾಜ್ ಕುಕ್ಕೇಟಿ, ಹೇಮಂತ್ ಮಠ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಗ್ರಾಮ ಪಂಚಾಯತಿ ಸದಸ್ಯರುಗಳು, ಸಹಕಾರಿ ಸಂಘದ ನಿರ್ದೇಶಕರುಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಹಾಲು ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ ಸ್ವಾಗತಿಸಿ, ತಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ ವಂದಿಸಿದರು.