ಮಳೆಯಾಳ ಕುಟುಂಬಸ್ಥರು ಪೈಲಾಜೆ ಎಂಬಲ್ಲಿ ನಿರ್ಮಿಸಿರುವ ತರವಾಡು ಮನೆಯ ಗೃಹಪ್ರವೇಶ ಮತ್ತು ನಾಗಪ್ರತಿಷ್ಠೆ ಹಾಗೂ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಕಾರ್ಯಕ್ರಮ ಜೂ. 5 ಮತ್ತು 6 ವಿವಿಧ ಧಾರ್ಮಿಕ ಮತ್ತು ವೈದಿಕ ಕಾರ್ಯಕ್ರಮ ಕೆಮ್ಮಿಂಜೆ ವೇದಮೂರ್ತಿ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಳೆಯಾಳ ತರವಾಡು ಮನೆಯಲ್ಲಿನಡೆಯಿತು.
ಈ ಸಂದರ್ಭದಲ್ಲಿ ಕುಟುಂಬದ ಯಜಮಾನ ವೆಂಕಟ್ರಮಣ ಗೌಡ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.