ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 07 ರಂದು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ. ಫಾ. ಪಾವ್ಲ್ ಕ್ರಾಸ್ತಾರವರು ಹಾಗೂ ಮುಖ್ಯ ಶಿಕ್ಷಕಿಯಾದ ಶ್ರೀಮತಿ ವನಿತಾರವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪರಿಸರ ಗೀತೆ ಮತ್ತು ಭಾಷಣದ ಮೂಲಕ ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಾಲಾ ಸಂಚಾಲಕರು ಶಾಲಾ ಆವರಣದಲ್ಲಿ ಗಿಡ ನೆಟ್ಟು ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಮುಖ್ಯಶಿಕ್ಷಕರು ಸುದ್ದಿ ಬಳಗ ಸುಳ್ಯ ಇವರು ಹಮ್ಮಿಕೊಂಡ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.