ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ,ಅರಣ್ಯ ಇಲಾಖೆ,ವಕೀಲರ ಸಂಘ, ನೆಹರೂ ಮೆಮೋರಿಯಲ್ ಕಾಲೇಜು ಅರಂತೋಡು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅರಂತೋಡು ನೆಹರು ಮೆಮೋರಿಯಲ್ ಕಾಲೇಜು, ಪ್ರೌಢಶಾಲಾ ವಿಭಾಗದಲ್ಲಿ ಇಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸೋಮಶೇಖರ ಎ ನೆರವೇರಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಎಂ.ಕೆ. ಸೀತಾರಾಮ ವಹಿಸಿದ್ದರು.
ವೇದಿಕೆಯಲ್ಲಿ ಸುಳ್ಯ ವಲಯ ಅರಣ್ಯ ಅಧಿಕಾರಿ ಗಿರೀಶ್ ಆರ್, ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ, ಮುಖ್ಯ ಅತಿಥಿಗಳಾಗಿ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ಬಿ, ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ಡಿ ದೇರಾಜೆ, ಅರಂತೋಡು ಕೃಷಿ ಪತ್ತಿನ ಸರಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ಪಾಪ್ಯುಲರ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕೆಆರ್ ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಬಳಿಕ ಶಾಲಾ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಅರಣ್ಯಧಿಕಾರಿ ಗಿರೀಶ್ ಸ್ವಾಗತಿಸಿ, ಅರಣ್ಯ ಇಲಾಖೆ ಸಿಬ್ಬಂದಿ ಸೌಮ್ಯ ವಂದಿಸಿದರು.